ಅರಂತೋಡು: ಸ್ವಾತಂತ್ರ್ಯ ದಿನಾಚರಣೆ ಹಾಗೂ ನಿವೃತ್ತ ಸೈನಿಕ ಫಸೀಲು ರವರಿಗೆ ಸನ್ಮಾನ

(ನ್ಯೂಸ್ ಕಡಬ) Newskadaba.com ಅರಂತೋಡು, ಆ. 15. ಅನ್ವ‍ಾರುಲ್ ಹುದಾ ಯಂಗ್ ಮೆನ್ಸ್ ಅಸೋಸಿಯೆಶನ್ ಹಾಗೂ ನುಸ್ರತುಲ್ ಇಸ್ಲಾಂ ಮದರಸ ಅರಂತೋಡು ಇದರ ಜಂಟಿ ಆಶ್ರಯದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ ಮತ್ತು ನಿವೃತ್ತ ಸೈನಿಕ ಫಸೀಲುರವರಿಗೆ ಸನ್ಮಾನ ಕಾರ್ಯಕ್ರಮವು ಆ.15ರಂದು ಅರಂತೋಡು ಮದರಸ ಸಭಾಂಗಣದಲ್ಲಿ ನಡೆಯಿತು.

 

ಇದರ ಅಧ್ಯಕ್ಷತೆಯನ್ನು ಬದ್ರಿಯಾ ಜುಮ್ಮಾಮಸೀದಿ ಅಧ್ಯಕ್ಷರಾದ ಅಶ್ರಫ್ ಗುಂಡಿ ವಹಿಸಿದ್ದರು. ನಿವೃತ್ತ ಸೈನಿಕ ಫಸೀಲುರವರನ್ನು ಸ್ಥಳೀಯ ಮಸೀದಿ ಖತೀಬರಾದ ಬಹು ಅಲ್ ಹಾಜ್ ಇಸ್ಹಾಖ್ ಬಾಖವಿ ಸನ್ಮಾನಿಸಿದರು. ಮುಖ್ಯ ಅತಿಥಿಗಳಾಗಿ ತೆಕ್ಕಿಲ್ ಗ್ರಾಮೀಣಾಭಿವೃದ್ಧಿ ಪ್ರತಿಷ್ಠಾನ ಅಧ್ಯಕ್ಷ ಟಿ.ಎಮ್.ಶಹೀದ್ ತೆಕ್ಕಿಲ್, ನುಸ್ರತುಲ್ ಇಸ್ಲಾಂ ಮದರಸ ಸಹಾಯಕ ಅಧ್ಯಾಪಕ ಹಾಜಿ ಸಾಜಿದ್ ಅಝ್ಹರಿ, ಜಮಾಅತ್ ಉಪಾಧ್ಯಕ್ಷ ಹಾಜಿ ಕೆ.ಎಮ್.ಮಹಮ್ಮದ್ ಅನ್ವಾರುಲ್ ಹುದಾ ಯಂಗ್ ಮೆನ್ಸ್ ಎಸೋಸಿಯೇಶನ್ ಅಧ್ಯಕ್ಷ ಮಜೀದ್, ನುಸ್ರತುಲ್ ಇಸ್ಲಾಂ ಮದರಸ ಮ್ಯಾನೇಜ್‌ಮೆಂಟ್‌ ಸಂಚಾಲಕ ಅಮೀರ್ ಕುಕ್ಕುಂಬಳ, ಜುಮ್ಮಾ ಮಸೀದಿ ಕಾರ್ಯದರ್ಶಿ ಮೂಸಾನ್ ಕೆ.ಎಮ್, ಜಮಾಅತ್ ಕೋಶಾಧಿಕಾರಿ ಬದ್ರುದ್ದೀನ್ ಪಠೇಲ್, ನಿವೃತ್ತ ಅಧ್ಯಾಪಕ ಅಬ್ದುಲ್ ಮಾಸ್ಟರ್ ಸೇರಿದಂತೆ ಜಮಾಅತ್ ಸದಸ್ಯರು, ಸ್ವಲಾತ್ ಸಮಿತಿ ಸದಸ್ಯರು, ಮದರಸ ವಿಧ್ಯಾರ್ಥಿಗಳು, ಎಸೋಸಿಯೆಶನ್ ಪದಾಧಿಕಾರಿಗಳು ಭಾಗವಹಿಸಿದರು. ಜಮಾಅತ್ ಕಾರ್ಯದರ್ಶಿ ಕೆ.ಎಮ್. ಸ್ವಾಗತಿಸಿ, ಮಜೀದ್ ವಂದಿಸಿದರು.

Also Read  ಜ್ಯೋತಿಷ್ಯದ ಪ್ರಕಾರ ಈ ರಾಶಿಯವರು ಹೆಚ್ಚು ಪ್ರೀತಿಸುತ್ತಾರೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಆಗುತ್ತದೆ

 

error: Content is protected !!
Scroll to Top