ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಯಲ್ಲಿ 75ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಆ.15. ಕಡಬ ಸೈಂಟ್ ಜೋಕಿಮ್ಸ್ ಶಿಕ್ಷಣ ಸಂಸ್ಥೆಯಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ದಿನಾಚರಣೆಯ ಅಂಗವಾಗಿ ಕೋವಿಡ್ ನಿಯಮಾನುಸಾರವಾಗಿ ಸಂಸ್ಥೆಯ ಸಂಚಾಲಕರಾದ ವಂ|ಫಾ| ಅರುಣ್ ವಿಲ್ಸನ್ ಲೋಬೋ ಇವರು ಧ್ವಜಾರೋಹಣವನ್ನು ನೆರವೇರಿಸಿದರು.

ಸೈಂಟ್ ಜೋಕಿಮ್ಸ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಸೈಮನ್ ಲೂಯಿಸ್ ರೊಡ್ರಿಗಸ್, ಸಂಸ್ಥೆಯ ಎಲ್ಲಾ ಮುಖ್ಯಸ್ಥರು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು. ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕಿ ಸಿಸ್ಟರ್ ಲಿಲ್ಲಿ ಮೋನಿಕ ರೆಬೆಲ್ಲೋ ರವರು ಸ್ವಾಗತಿಸಿ ಕಾರ್ಯಕ್ರಮವನ್ನು ನಿರೂಪಿಸಿದರು. ಸೈಂಟ್ ಆನ್ಸ್ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿ ಶ್ರೀಮತಿ ದಕ್ಷಾ ವಂದಿಸಿದರು.

Also Read  ಬಂಟ್ವಾಳ: ಮನೆಯವರು ಮಲಗಿದ್ದ ವೇಳೆ ಕಳ್ಳರ ಕೈಚಳಕ ➤ 12 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

 

 

 

error: Content is protected !!
Scroll to Top