ಮೂರು ಜಿಲ್ಲೆಗಳನ್ನು ಹೊರತುಪಡಿಸಿ ಇಂದು ರಾಜ್ಯದಲ್ಲಿ ಶಾಲೆ ಆರಂಭ ➤ ದ.ಕ., ಉಡುಪಿ, ಕೊಡಗು ಜಿಲ್ಲೆಗಳಿಗೆ ವಿನಾಯಿತಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.23‌. ದಕ್ಷಿಣ ಕನ್ನಡ, ಉಡುಪಿ ಹಾಗೂ ಕೊಡಗು ಜಿಲ್ಲೆಗಳನ್ನು ಹೊರತುಪಡಿಸಿ ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಇಂದಿನಿಂದ ಶಾಲೆ ಆರಂಭವಾಗಲಿದೆ ಎಂದು ರಾಜ್ಯ ಸರಕಾರ ತಿಳಿಸಿದೆ.

ಕೊರೋನಾ ಪಾಸಿಟಿವಿಟಿ ದರ ಶೇ.2 ಕ್ಕಿಂತ ಹೆಚ್ಚಿರುವ ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಶಾಲೆಯನ್ನು ಆರಂಭಿಸುವುದಿಲ್ಲ ಎಂದು ರಾಜ್ಯ ಶಿಕ್ಷಣ ಇಲಾಖೆಯು ಈ ಹಿಂದೆ ತಿಳಿಸಿತ್ತು. ಇದೀಗ ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳಲ್ಲಿ ಶೇ.2ಕ್ಕಿಂತ ಕಡಿಮೆ ಪಾಸಿಟಿವಿಟಿ ದರ ಇರುವ ಕಾರಣ ಇಂದಿನಿಂದ ತರಗತಿಯನ್ನು ಪ್ರಾರಂಭಿಸಲಾಗುತ್ತಿದೆ. ಕೊರೋನಾ ವಾರ್‌ ರೂಂ ಬುಲೆಟಿನ್‌ ಪ್ರಕಾರ, ದಕ್ಷಿಣ ಕನ್ನಡ, ಉಡುಪಿ, ಕೊಡಗು ಜಿಲ್ಲೆಗಳು ಮಾತ್ರ ಶೇ. 2 ಕ್ಕಿಂತ ಅಧಿಕ ಪಾಸಿಟಿವಿಟಿ ದರ ಹೊಂದಿವೆ. ಒಟ್ಟಾರೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.8 ಇದೆ. ಮರಣ ದರ ಶೇ. 1.3 ಇದೆ.

Also Read  ಬಿಸ್ಕೆಟ್ ಕೊಡಿಸುವುದಾಗಿ ನಂಬಿಸಿ ಬಾಲಕಿಯ ಅತ್ಯಾಚಾರ  - ಕಾರ್ಮಿಕನ ಬಂಧನ !!

 

 

 

error: Content is protected !!