ಉಪ್ಪಿನಂಗಡಿ: ಮೀನಿನ ಅಂಗಡಿಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು ➤ ಗಲಭೆಗೆ ಹುನ್ನಾರ..?

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ.23. ಇಲ್ಲಿನ ಹಳೆಗೇಟು ಬಳಿ ಇರುವ ಮೀನಿನ ಅಂಗಡಿಯೊಂದಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿರುವ ಘಟನೆ ಭಾನುವಾರ ತಡರಾತ್ರಿ ನಡೆದಿದೆ.

ಇಲ್ಲಿನ ಹಳೆಗೇಟು ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬಳಿ ಅಶೋಕ್ ಎಂಬವರಿಗೆ ಸೇರಿದ ಮೀನಿನ ಅಂಗಡಿಯಿದ್ದು, ಅದಕ್ಕೆ ಆದಿತ್ಯವಾರ ತಡರಾತ್ರಿ ಕಿಡಿಗೇಡಿಗಳು ಬೆಂಕಿ ಹಚ್ಚಿ ಪರಾರಿಯಾಗಿದ್ದಾರೆ. ಘಟನೆಯಿಂದ ಮೀನಿನ ಅಂಗಡಿ ಹಾಗೂ ಮಂಜುಗಡ್ಡೆ ಹಾಕಿ ಶೇಖರಿಸಿಟ್ಟ ಮೀನು ಸುಟ್ಟು ಹೋಗಿವೆ. ಅಶೋಕ್ ಅವರು ಹಿಂದೂ ಪರ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದು, ಗಲಭೆಗೆ ಕುಮ್ಮಕ್ಕು ನೀಡುವ ಉದ್ದೇಶದಿಂದ ಈ ಕೃತ್ಯ ನಡೆಸಿರುವ ಸಾಧ್ಯತೆ ಇದೆ ಎಂಬ ಆರೋಪ ಕೇಳಿಬಂದಿದೆ. ಹಿಂದೂ ಪರ ಸಂಘಟನೆಯ ಕಾರ್ಯಕರ್ತರು ಸ್ಥಳದಲ್ಲಿ ಜಮಾಯಿಸಿದ್ದು ಕಿಡಿಗೇಡಿಗಳ ಶೀಘ್ರ ಬಂಧನಕ್ಕೆ ಆಗ್ರಹಿಸಿದ್ದಾರೆ. ಸ್ಥಳಕ್ಕೆ ಶಾಸಕ ಸಂಜೀವ ಮಠಂದೂರು, ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಬಜೆಟ್‍ನಲ್ಲಿ ಜಿಲ್ಲೆಯ ಬೇಡಿಕೆ ಈಡೇರಿಕೆಗೆ ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ

 

 

 

 

error: Content is protected !!
Scroll to Top