ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಿಲ್ಲದ ಕೊರೋನಾ ನಾಗಾಲೋಟ ➤ ಇಂದು ರಾತ್ರಿಯಿಂದಲೇ ಕರ್ಫ್ಯೂ

(ನ್ಯೂಸ್ ಕಡಬ) newskadaba.com ಮಂಗಳೂರು, ಆ.27. ದ.ಕ.ಜಿಲ್ಲೆಯಲ್ಲಿ ಕೊರೋನಾ ಪ್ರಕರಣಗಳನ್ನು ನಿಯಂತ್ರಿಸುವ ಸಲುವಾಗಿ ಇಂದು ರಾತ್ರಿಯಿಂದ ಸೋಮವಾರ ಬೆಳಿಗ್ಗೆಯ ವರೆಗೆ ಕರ್ಫ್ಯೂ ಜಾರಿಗೊಳಿಸಲಾಗಿದೆ ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.

ಇಂದು ರಾತ್ರಿ 9ರಿಂದ ಆರಂಭಗೊಳ್ಳುವ ವೀಕೆಂಡ್ ಕರ್ಫ್ಯೂ ಸೋಮವಾರ ಬೆಳಗ್ಗೆ 5 ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಆ.28ರ ಶನಿವಾರ ಮತ್ತು ಆ.29ರ ಭಾನುವಾರ ಮಧ್ಯಾಹ್ನ 2ರ ವರೆಗೆ ಅಗತ್ಯ ವಸ್ತುಗಳ ಖರೀದಿಗೆ ಅವಕಾಶ ಕಲ್ಪಿಸಲಾಗಿದೆ. ವಾರಾಂತ್ಯ ಕರ್ಫ್ಯೂ ವೇಳೆ ಯಾವುದೇ ವಾಣಿಜ್ಯ ಚಟುವಟಿಕೆಗಳಿಗೆ ಅವಕಾಶವಿಲ್ಲ. ಆದರೆ ತುರ್ತು ಸೇವೆಗೆ ಅನುಮತಿ ನೀಡಲಾಗಿದೆ. ರೆಸ್ಟೋರೆಂಟ್, ಹೊಟೇಲ್‌ಗಳಲ್ಲಿ ಕೇವಲ ಪಾರ್ಸಲ್‌ಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ವಿಮಾನ, ರೈಲು, ಬಸ್ ಸಂಚಾರಗಳಿಗೆ ಅನುಮತಿ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.

Also Read  ಮೂಡುಬಿದಿರೆ :ಅಪರಾಧ ತಡೆಗೆ ಪೇಟೆಯಲ್ಲಿ ವಾಹನ ಜಾಥಾ

 

 

 

error: Content is protected !!
Scroll to Top