(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.30. ರಾಜ್ಯದಲ್ಲಿ 6ರ ಮೇಲಿನ ತರಗತಿಯನ್ನು ಆರಂಭಿಸಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ನಡೆದ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ.
ಸೆಪ್ಟೆಂಬರ್ 6 ರಿಂದ ಶಾಲೆಗಳು ಆರಂಭವಾಗಲಿದ್ದು, ಸೋಮವಾರದಿಂದ ಶುಕ್ರವಾರದವರೆಗೆ 5 ದಿನಗಳ ಕಾಲ ಶಾಲೆಯನ್ನು ತೆರೆಯಲಾಗುವುದು. ಶೇಕಡ 50 ರಷ್ಟು ಮಕ್ಕಳು ದಿನಬಿಟ್ಟು ದಿನ ಶಾಲೆಗೆ ಹಾಜರಾಗಬೇಕು. ಪಾಸಿಟಿವಿಟಿ ದರ ಶೇಕಡ 2 ಕ್ಕಿಂತ ಕಡಿಮೆ ಇರುವ ತಾಲ್ಲೂಕುಗಳಲ್ಲಿ ಶಾಲೆಗಳನ್ನು ವಾರದಲ್ಲಿ 5 ದಿನ ತೆರೆಯಲು ಸರ್ಕಾರದಿಂದ ಅನುಮತಿ ನೀಡಲಾಗಿದೆ. ಉಳಿದ ಎರಡು ದಿನ ಶಾಲೆಯನ್ನು ಸ್ವಚ್ಛಗೊಳಿಸಲು ಅವಕಾಶ ನೀಡಲಾಗಿದೆ ಎಂದವರು ತಿಳಿಸಿದ್ದಾರೆ.