ಶಿರಾಡಿ ಘಾಟ್ ನಲ್ಲಿ ಮತ್ತೆ ಸಂಚಾರ ಬಂದ್ ➤ ಹಾಸನ ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಹಾಸನ, ಆ.31. ಮಂಗಳೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಶಿರಾಡಿಘಾಟ್‌ನಲ್ಲಿ ವಾಹನಗಳ ಸಂಚಾರಕ್ಕೆ ಮತ್ತೆ ನಿರ್ಬಂಧ ವಿಧಿಸಿ ಹಾಸನ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಸಕಲೇಶಪುರ ಸಮೀಪದ ದೋಣಿಗಲ್ ಬಳಿ ತಿಂಗಳ ಹಿಂದೆ ರಸ್ತೆಯ ಒಂದು ಭಾಗದಲ್ಲಿ ಭೂ ಕುಸಿತವುಂಟಾಗಿದ್ದರಿಂದ ವಾಹನಗಳ ಸಂಚಾರವನ್ನು ನಿರ್ಬಂಧಿಸಲಾಗಿತ್ತು. ರಸ್ತೆ ದುರಸ್ತಿಯಾಗಿದ್ದರಿಂದ 20 ಟನ್ ಸರಕು ಸಾಗಾಣೆಯ ಲಾರಿಗಳು, ಟ್ಯಾಂಕರ್‌ಗಳು ಸೇರಿದಂತೆ ಎಲ್ಲ ವಾಹನಗಳ ಸಂಚಾರಕ್ಕೆ ಆಗಸ್ಟ್ 16 ರಿಂದ ಅನುಮತಿ ನೀಡಲಾಗಿತ್ತು. ಆದರೆ ಈಗ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರದ ಯೋಜನಾ ನಿರ್ದೇಶಕರ ಕೋರಿಕೆಯಂತೆ ಕೆಎಸ್‌ಆರ್‌ಟಿಸಿ, ಖಾಸಗಿ ಬಸ್ಸು, ಜೀಪು, ಮ್ಯಾಕ್ಸಿಕ್ಯಾಬ್, ಕಾರುಗಳು ಸೇರಿದಂತೆ ಪ್ರಯಾಣಿಕರ ವಾಹನಗಳು, ಆ್ಯಂಬುಲೆನ್ಸ್, ಅಗ್ನಿಶಾಮಕ ವಾಹನಗಳ ಹೊರತುಪಡಿಸಿ ಇನ್ನುಳಿದ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

Also Read  ಎಂಎಲ್ ಸಿ ಉಪಚುನಾವಣೆ ➤ ಶೆಟ್ಟರ್, ತಿಪ್ಪಣ್ಣ, ಬೋಸರಾಜು ಅವಿರೋಧ ಆಯ್ಕೆ

 

 

 

error: Content is protected !!
Scroll to Top