ನಾಳೆ(ಸೆ.01) ಸಿಎಂ ಬಸವರಾಜ ಬೊಮ್ಮಾಯಿ ಸವಣೂರಿಗೆ ಭೇಟಿ ➤ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ

(ನ್ಯೂಸ್ ಕಡಬ) newskadaba.com ಹಾವೇರಿ, ಆ.31. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನಾಳೆ (ಸೆ.1) ಶಿಗ್ಗಾವಿ ಹಾಗೂ ಸವಣೂರು ಕ್ಷೇತ್ರದ ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಶಿಗ್ಗಾವಿ ತಾಲೂಕಿನ ತಡಸ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆಯ ರಸ್ತೆ ಸುಧಾರಣೆ ಕಾಮಗಾರಿ ಮತ್ತು ಪ್ರವಾಸಿ ಮಂದಿರದ ನೂತನ ಕಟ್ಟಡ ಕಾಮಗಾರಿಗೆ ಶಂಕು‌ಸ್ಥಾಪನೆ ನೆರವೇರಿಸಲಿದ್ದಾರೆ. ಜಲಸಂಪನ್ಮೂಲ ಇಲಾಖೆಯ ಶಿಗ್ಗಾವಿ ಏತ ನೀರಾವರಿ ಯೋಜನೆಯಡಿ 39 ಕೆರೆಗಳಿಗೆ ನೀರು ತುಂಬಿಸುವ ಕಾಮಗಾರಿಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಸಮಾಜ ಕಲ್ಯಾಣ ಇಲಾಖೆಯ ಅಟಲ್‌ ಬಿಹಾರಿ ವಾಜಪೇಯಿ ವಸತಿ ನಿಲಯದ ನೂತನ ಕಟ್ಟಡ ಉದ್ಘಾಟಿಸಲಿದ್ದಾರೆ.
ಬಂಕಾಪುರದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಶಾದಿಮಹಲ್‌ ನೂತನ ಕಟ್ಟಡ ಉದ್ಘಾಟನೆ ನೆರವೇರಿಸಿ, ಕಾರವಾರ-ಇಳಕಲ್ಲ ರಸ್ತೆ ಸುಧಾರಣೆ ‌ಕಾಮ‌ಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಅಪರಾಹ್ನ ಸವಣೂರಿನ ಎಪಿಎಂಸಿ ಹತ್ತಿರ ಲೋಕೋಪಯೋಗಿ ಇಲಾಖೆಯ ಕಾರವಾರ-ಇಳಕಲ್ ರಸ್ತೆ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ದೊಡ್ಡ ಹುಣಸೆಕಲ್ ಮಠದ ಶ್ರೀ ಚನ್ನಬಸವೇಶ್ವರ ಮಂಗಲ ಭವನ ಹಾಗೂ ಕೆಸಿಸಿ ಬ್ಯಾಂಕ್‌ ಉದ್ಘಾಟಿಸಲಿದ್ದಾರೆ.

Also Read  ವೆನ್ಲಾಕ್ - ಶುಶ್ರೂಷಕರು ಹಾಗೂ ಫಾರ್ಮಾಸಿಸ್ಟ್ ಹುದ್ದೆಗಳಿಗೆ ನೇರ ನೇಮಕಾತಿ

 

 

 

error: Content is protected !!
Scroll to Top