BIG NEWS: ಕಡಬ ಪೊಲೀಸ್ ಬೊಲೆರೋ ಹಾಗೂ ಖಾಸಗಿ ಬೊಲೆರೋ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com ಕಡಬ, ಸೆ.04. ಕಡಬ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅವರ ಬೊಲೆರೋ ವಾಹನ ಹಾಗೂ ಖಾಸಗಿ ಬೊಲೆರೋ ಮುಖಾಮುಖಿ ಢಿಕ್ಕಿಯಾದ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕಡಬ ಸಮೀಪದ ಕಳಾರ ಎಂಬಲ್ಲಿ ಶನಿವಾರ ಬೆಳಿಗ್ಗೆ ನಡೆದಿದೆ.

ಕಡಬ ಎಸ್ಐ ರುಕ್ಮನಾಯ್ಕ್ ತನ್ನ ಸಿಬ್ಬಂದಿಗಳೊಂದಿಗೆ ಇಲಾಖಾ ವಾಹನದಲ್ಲಿ ಉಪ್ಪಿನಂಗಡಿ ಕಡೆಗೆ ತೆರಳುತ್ತಿದ್ದ ವೇಳೆ ಕಳಾರ ಸಮೀಪ ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಬೊಲೆರೋ ನಡುವೆ ಮುಖಾಮುಖಿ ಢಿಕ್ಕಿಯಾಗಿದೆ ಘಟನೆಯಲ್ಲಿ ವಾಹನಗಳೆರಡು ನಜ್ಜುಗುಜ್ಜಾಗಿದ್ದು, ಎರಡೂ ವಾಹನದಲ್ಲಿದ್ದವರು ಅಪಾಯದಿಂದ ಪಾರಾಗಿದ್ದಾರೆ ಎಂದು ತಿಳಿದುಬಂದಿದೆ.

 

 

 

 

Scroll to Top