ಸೈಬರ್ ಕ್ರೈಮ್ ಅಪರಾಧ ಹಿನ್ನೆಲೆ ➤ ಪಶ್ಚಿಮ ಬಂಗಾಳ ಪೊಲೀಸರಿಂದ ಕಡಬದ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಕಡಬ, ಸೆ.04. ಸಾಮಾಜಿಕ ಜಾಲತಾಣದಲ್ಲಿ ಯುವತಿಯೋರ್ವಳ ಖಾತೆಯನ್ನು ನಕಲಿಸಿದ ಹಿನ್ನೆಲೆಯಲ್ಲಿ ಕಡಬದ ಯುವಕನನ್ನು ಪಶ್ಚಿಮ ಬಂಗಾಳ ಪೊಲೀಸರು ಶನಿವಾರದಂದು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಕಡಬ ತಾಲೂಕಿನ ನೂಜಿಬಾಳ್ತಿಲ ನಿವಾಸಿ ಪ್ರಸ್ತುತ ಮಂಗಳೂರಿನಲ್ಲಿ ಟ್ರೇಡಿಂಗ್ ವ್ಯವಹಾರ ನಡೆಸುತ್ತಿರುವ ಸಂಜಯ್ ಕೃಷ್ಣ ಎಂದು ಗುರುತಿಸಲಾಗಿದೆ. ಬೆಂಗಳೂರಿನಲ್ಲಿ ವ್ಯಾಸಂಗ ಮಾಡುತ್ತಿರುವ ಪಶ್ಚಿಮ ಬಂಗಾಳದ ಯುವತಿಗೆ ಸಂಬಂಧಿಸಿದ ಖಾತೆಯನ್ನು ಯಾರೋ ಅಪರಿಚಿತರು ನಕಲಿಸಿ ಉಪಯೋಗಿಸಿರುವ ಬಗ್ಗೆ ಯುವತಿಯು ಪಶ್ಚಿಮ ಬಂಗಾಳದಲ್ಲಿ ದೂರು ದಾಖಲಿಸಿದ್ದರು. ಸೈಬರ್ ಕ್ರೈಮ್ ನಡಿ ದೂರು ದಾಖಲಿಸಿಕೊಂಡ ಕಲ್ಕತ್ತಾ ಪೊಲೀಸರು ಪ್ರಕರಣದ ಜಾಡು ಹಿಡಿದು ಎರಡು ದಿನಗಳ ಹಿಂದೆ ಕಡಬಕ್ಕೆ ಆಗಮಿಸಿದ್ದರು. ಇಂದು ಆರೋಪಿಯನ್ನು ಬಂಧಿಸಿದ್ದು, ಪುತ್ತೂರು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ‌.

Also Read  ಬಿಜೆಪಿ ಶಾಸಕ ಮುನಿರತ್ನ ಮತ್ತೆ ಬಂಧನ: ಅತ್ಯಾಚಾರ ಆರೋಪ

 

 

 

 

error: Content is protected !!
Scroll to Top