ಕಡಬ: ಅಪರಿಚಿತ ಮೃತದೇಹದ ಗುರುತು ಪತ್ತೆ



(ನ್ಯೂಸ್ ಕಡಬ) newskadaba.com ಕಡಬ, ಸೆ.06. ಇಲ್ಲಿಗೆ ಸಮೀಪದ ನೆಟ್ಟಣ ರೈಲ್ವೇ ನಿಲ್ದಾಣದ ಪಕ್ಕದ ಗುಡ್ಡದಲ್ಲಿ ವ್ಯಕ್ತಿಯೋರ್ವರ ಮೃತದೇಹವೊಂದು ಸೋಮವಾರದಂದು ಪತ್ತೆಯಾಗಿದೆ.







ಮೃತ ವ್ಯಕ್ತಿಯನ್ನು ತುಮಕೂರು ಜಿಲ್ಲೆಯ ಕುಣಿಗಲ್ ತಾಲೂಕಿನ ಪತಂಜಲಿ ನಗರ ನಿವಾಸಿ ದಿ| ಶಿವಲಿಂಗಯ್ಯ ಎಂಬವರ ಪುತ್ರ ರಾಜಶೇಖರ್ ಎಂದು ಗುರುತಿಸಲಾಗಿದೆ. ರೈಲು ನಿಲ್ದಾಣದ ಪಕ್ಕದ ಗುಡ್ಡದಲ್ಲಿ ಮಲಗಿರುವ ಸ್ಥಿತಿಯಲ್ಲಿ ರಾಜಶೇಖರ್ ಅವರ ಮೃತದೇಹವು ಪತ್ತೆಯಾಗಿದೆ. ಬಾಯಿಯಲ್ಲಿ ರಕ್ತದ ಕಲೆ ಕಂಡುಬಂದಿದ್ದು, ಆತ್ಮಹತ್ಯೆಯೋ ಅಥವಾ ಕೊಲೆಯೋ ಎನ್ನುವುದು ತನಿಖೆಯ ನಂತರವಷ್ಟೇ ತಿಳಿದು ಬರಬೇಕಿದೆ. ಸ್ಥಳೀಯರು ಕಡಬ ಪೊಲೀಸ್ ಠಾಣೆಗೆ ಮಾಹಿತಿ ನೀಡಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






 

 

 

error: Content is protected !!
Scroll to Top