(ನ್ಯೂಸ್ ಕಡಬ) newskadaba.com ಕಡಬ, ಸೆ.07. ಇಲ್ಲಿನ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಸಭಾಭವನದಲ್ಲಿ ಶಿಕ್ಷಕರ ದಿನಾಚರಣೆಯನ್ನು ಸೋಮವಾರದಂದು ವಿಧ್ಯುಕ್ತವಾಗಿ ಆಚರಿಸಲಾಯಿತು.
ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸ್ಥೆಯ ಸಂಚಾಲಕರಾದ ರೆ. ಫಾದರ್ ಅರುಣ್ ವಿಲ್ಸನ್ ಲೋಬೊರವರು “ಡಾ. ಎಸ್. ರಾಧಾಕೃಷ್ಣನ್ ರವರ ಆದರ್ಶವು ಎಳೆಯ ಮನಸ್ಸುಗಳಲ್ಲಿ ನೆಲೆ ನಿಲ್ಲಲು ಹಾಗೂ ನಮ್ಮ ಗುರುಪರಂಪರೆಯ ಬಗ್ಗೆ ಗೌರವ ಹೊಂದಿ ವಿದ್ಯಾರ್ಥಿಗಳು ಉತ್ತಮ ಮನಸ್ಸಿನ ಹೃದಯವಂತ ವ್ಯಕ್ತಿಗಳಾಗಿ ಬೆಳೆಯಲು ಇಂತಹ ಕಾರ್ಯಕ್ರಮ ಪೂರಕವಾಗಿದೆ. ಶಿಕ್ಷಕರನ್ನು ಗೌರವಿಸುವ ಜೊತೆಗೆ ಅವರ ಮಾರ್ಗದರ್ಶನದಂತೆ ನಡೆದಾಗ ಬದುಕು ಸಾರ್ಥಕವಾಗುತ್ತದೆ ಎಂದರು. ಸೈಂಟ್ ಆನ್ಸ್ ಶಾಲೆಯ ಪ್ರಾಂಶುಪಾಲರಾದ ರೆ. ಫಾ.ಅಮಿತ್ ಪ್ರಕಾಶ್ ರೊಡ್ರಿಗಸ್, ಸೈಂಟ್ ಜೋಕಿಮ್ಸ್ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಸಿಸ್ಟರ್ ಮೋನಿಕಾ ರೆಬೆಲ್ಲೋ, ಸೈಂಟ್ ಜೋಕಿಮ್ಸ್ ಕಾಲೇಜಿನ ಪ್ರಾಚಾರ್ಯರಾದ ಕಿರಣ್ ಕುಮಾರ್, ಸೈಂಟ್ ಜೋಕಿಮ್ಸ್ ಪ್ರೌಢ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಶ್ರೀಲತಾ, ಸೈಂಟ್ ಆನ್ಸ್ ಪ್ರಾಥಮಿಕ ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ದಕ್ಷಾ ಪ್ರಸಾದ್ ಉಪಸ್ಥಿತರಿದ್ದು ಸಂಚಾಲಕರ ಜೊತೆಗೆ ಡಾ.ಎಸ್. ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.
ಶಿಕ್ಷಕ ವೃಂದಕ್ಕೆ ವಿದ್ಯಾರ್ಥಿಗಳು ಗೀತೆಯ ಮೂಲಕ ನಮಿಸಿದರು ಸೈಂಟ್ ಆನ್ಸ್ ಪ್ರೌಢ ಶಾಲಾ ವಿದ್ಯಾರ್ಥಿನಿ ಸನುಷ ಇವರಿಂದ ಶಿಕ್ಷಕರ ದಿನಾಚರಣೆಯ ಮಹತ್ವದ ಕುರಿತು ಭಾಷಣ ನೆರವೇರಿತು. ಸೈಂಟ್ ಜೋಕಿಮ್ಸ್ ಪ್ರೌಢಶಾಲಾ ವಿದ್ಯಾರ್ಥಿನಿ ನಿಶ್ಮಿತಾ ಸ್ವಾಗತಿಸಿ, ಸೈಂಟ್ ಆನ್ಸ್ ಪ್ರಾಥಮಿಕ ಶಾಲಾ ವಿದ್ಯಾರ್ಥಿನಿ ಸಾನ್ವಿ ಎನ್. ಕೆ. ವಂದಿಸಿದರು. ಸೈಂಟ್ ಜೋಕಿಮ್ಸ್ ಕಾಲೇಜಿನ ವಿದ್ಯಾರ್ಥಿನಿ ಪಲ್ಲವಿ ಬಿ.ಡಿ. ಕಾರ್ಯಕ್ರಮ ನಿರೂಪಿಸಿದರು.