ಕೈಕಂಬ: ಹೆದ್ದಾರಿಗೆ ಉರುಳಿ ಬಿದ್ದ ಮರ ಪಿಡಬ್ಲ್ಯೂಡಿಯಿಂದ ತೆರವು ➤ ಸುಬ್ರಹ್ಮಣ್ಯ-ಗುಂಡ್ಯ ರಾಜ್ಯ ರಸ್ತೆಯಲ್ಲಿ ಸುಗಮ ಸಂಚಾರಕ್ಕೆ ಅನುವು

(ನ್ಯೂಸ್ ಕಡಬ) newskadaba.com ಕಡಬ, ಸೆ.07. ರಾಜ್ಯ ಹೆದ್ದಾರಿ 114 ರ ಗುಂಡ್ಯ ಸುಬ್ರಹ್ಮಣ್ಯ ರಸ್ತೆಯ ಚೇರು ಸಮೀಪ ಹೆದ್ದಾರಿಗೆ ಅಡ್ಡವಾಗಿ ಬಿದ್ದಿದ್ದ ಬೃಹತ್ ಮರವನ್ನು ಲೋಕೋಪಯೋಗಿ ಇಲಾಖೆಯಿಂದ ತೆರವುಗೊಳಿಸಲಾಗಿದೆ.

ಮಂಗಳವಾರ ಬೆಳಿಗ್ಗೆ ಸುರಿದ ಭಾರೀ ಗಾಳಿ ಮಳೆಗೆ ಬೃಹತ್ ಗಾತ್ರದ ಮರ ರಸ್ತೆಗಡ್ಡವಾಗಿ ಉರುಳಿ ಬಿದ್ದಿತ್ತು. ಪರಿಣಾಮ ರಸ್ತೆಯ ಇಕ್ಕೆಲಗಳಲ್ಲೂ ವಾಹನಗಳು ಸಾಲುಗಟ್ಟಿ ನಿಂತಿದ್ದವು. ವಿಚಾರ ತಿಳಿದ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳು ಮರವನ್ನು ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ.

Also Read  ಬಂಟ್ವಾಳ: ಅಕ್ರಮ ಗೋಸಾಗಾಟ ತಡೆಹಿಡಿದ ಬಜರಂಗದಳ ಕಾರ್ಯಕರ್ತರು ➤ ಗೋವುಗಳ ರಕ್ಷಣೆ

 

 

 

error: Content is protected !!
Scroll to Top