ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಅಪ್ರಾಪ್ತ ಬಾಲಕಿಯ ಅತ್ಯಾಚಾರ ➤ ಮಗುವಿಗೆ ಜನ್ಮ ನೀಡಿದ ಬಾಲಕಿ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.07. ಇನ್ಸ್‌ಟಾಗ್ರಾಂ ನಲ್ಲಿ ಪರಿಚಯವಾದ ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಎಸಗಿದ ಪರಿಣಾಮ ಸಂತ್ರಸ್ತೆ ಮಗುವಿಗೆ ಜನ್ಮ‌ನೀಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.





ಉಪ್ಪಿನಂಗಡಿ ನಿವಾಸಿ ಮಸೂದ್ ಎಂಬಾತ ಇನ್ಸ್‌ಟಾಗ್ರಾಂನಲ್ಲಿ ಪರಿಚಯವಾದ 17 ವರ್ಷದ ಅಪ್ರಾಪ್ತ ಬಾಲಕಿಯ ಮನೆಯಲ್ಲಿ ಯಾರೂ ಇಲ್ಲದ ವೇಳೆ ಅತ್ಯಾಚಾರ ಎಸಗಿದ್ದು, ಬಾಲಕಿ ಗರ್ಭಿಣಿಯಾಗಿರುವುದು ತಿಳಿಯುತ್ತಿದ್ದಂತೆಯೇ ಆರೋಪಿ ಮಸೂದ್ ವಿದೇಶಕ್ಕೆ ತೆರಳಿದ್ದಾನೆ ಎನ್ನಲಾಗಿದೆ. ಇದೀಗ ಬಾಲಕಿಯು ಬಂಟ್ವಾಳದ ಖಾಸಗಿ ಆಸ್ಪತ್ರೆಯಲ್ಲಿ ಮಗುವಿಗೆ ಜನ್ಮ ನೀಡಿದ್ದು, ದಾಖಲಾತಿ ಸಂದರ್ಭದಲ್ಲಿ ಮನೆಯವರು ಅಸ್ಪಷ್ಟವಾಗಿ ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಆಸ್ಪತ್ರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಆಗಮಿಸಿ ವಿಚಾರಣೆ ನಡೆಸಿದ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.






ಇದೀಗ ಆರೋಪಿ ಮಸೂದ್ ವಿದೇಶಕ್ಕೆ ತೆರಳಿ ತಲೆಮರೆಸಿಕೊಂಡಿರುವ ಬಗ್ಗೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

 

 

 

error: Content is protected !!
Scroll to Top