2 ತಿಂಗಳ ಕಾಲ ಕೇರಳಕ್ಕೆ ಹೋಗುವುದು, ಬರುವುದಕ್ಕೆ ಸಂಪೂರ್ಣ ನಿಷೇಧ ➤ ದ.ಕ. ಜಿಲ್ಲಾಧಿಕಾರಿ ಆದೇಶ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.09. ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ಮತ್ತು ನಿಫಾ ವೈರಸ್ ಹರಡುತ್ತಿರುವುದರಿಂದ ಕೇರಳ ಕಡೆಯಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಆಗಮಿಸುವವರನ್ನು ಮತ್ತು ಅಲ್ಲಿಗೆ ತೆರಳುವವರನ್ನು ಮುಂದಿನ ಎರಡು ತಿಂಗಳ ಕಾಲ ನಿರ್ಬಂಧಿಸಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಆದೇಶ ಹೊರಡಿಸಿದ್ದಾರೆ.

ಪ್ಯಾರಾ ಮೆಡಿಕಲ್, ನರ್ಸಿಂಗ್ ಇನ್ನಿತರ ಉದ್ದೇಶಕ್ಕಾಗಿ ಕೇರಳದಿಂದ ಜಿಲ್ಲೆಗೆ ಬರುವ ವಿದ್ಯಾರ್ಥಿಗಳು ಅಕ್ಟೋಬರ್ ಅಂತ್ಯದ ವರೆಗೆ ಮಂಗಳೂರಿಗೆ ಬಾರದಂತೆ ಆಯಾ ಶಿಕ್ಷಣ ಸಂಸ್ಥೆಗಳಿಗೆ ಜಿಲ್ಲಾಧಿಕಾರಿ ನಿರ್ದೇಶನ ನೀಡಿದ್ದಾರೆ. ಅಲ್ಲದೆ, ಕೇರಳಕ್ಕೆ ತೆರಳುವವರು ಕೂಡಾ ತಮ್ಮ ಪ್ರಯಾಣವನ್ನು ಅಕ್ಟೋಬರ್ ಅಂತ್ಯದ ವರೆಗೆ ಮುಂದೂಡುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ. ಅಲ್ಲದೆ, ಆಸ್ಪತ್ರೆಗಳು, ನರ್ಸಿಂಗ್ ಹೋಮ್ ಗಳು, ಕಚೇರಿಗಳು, ಹೊಟೇಲ್ ಗಳು, ಕೈಗಾರಿಕೆಗಳು ಸೇರಿದಂತೆ ಎಲ್ಲಾ ರೀತಿಯ ಉದ್ಯೋಗದಾತರು ತಮ್ಮ ಕೇರಳ ಮೂಲದ ಸಿಬ್ಬಂದಿಗಳನ್ನು ಯಾವುದೇ ಕಾರಣಕ್ಕೂ ಕರ್ನಾಟಕ ಪ್ರವೇಶ ಮಾಡದಂತೆ ಸೂಚಿಸಿದ್ದಾರೆ. ಅಲ್ಲದೆ, ಕೇರಳಕ್ಕೆ ಪ್ರಯಾಣಿಸದಂತೆ ನಿರ್ಬಂಧ ವಿಧಿಸಲು ಕೈಗಾರಿಕೆ ಇನ್ನಿತರ ಕಂಪನಿಗಳ ಮಾಲಕರಿಗೆ ಸೂಚಿಸಿದ್ದಾರೆ. ಅದೇ ರೀತಿ, ಸಾರ್ವಜನಿಕರು ಯಾವುದೇ ತುರ್ತು ಕಾರಣಗಳಿಲ್ಲದೇ ಇದ್ದಲ್ಲಿ ಅಕ್ಟೋಬರ್ ಅಂತ್ಯದ ವರೆಗೆ ಕೇರಳ ರಾಜ್ಯಕ್ಕೆ ಪ್ರಯಾಣಿಸಕೂಡದು ಎಂದು ತಮ್ಮ ಆದೇಶದಲ್ಲಿ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.

Also Read  ಓವರ್‌ಟೇಕ್ ಭರಾಟೆ: ಕೆಎಸ್‌ಆರ್‌ಟಿಸಿ ಬಸ್‌ - ಬೊಲೇರೋ ಢಿಕ್ಕಿ ► ಶಾಲಾ ವಿದ್ಯಾರ್ಥಿಗೆ ಗಾಯ

 

 

 

error: Content is protected !!
Scroll to Top