ನೆಲ್ಯಾಡಿ: ಗಣಪತಿ ಕಟ್ಟೆಯನ್ನು ಹಾನಿಗೊಳಿಸಿದ ಕಿಡಿಗೇಡಿಗಳು ➤ ಸ್ಥಳದಲ್ಲಿ ಜಮಾಯಿಸಿದ ಭಕ್ತರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.11. ಇಲ್ಲಿಗೆ ಸಮೀಪದ ಉದನೆ ಎಂಬಲ್ಲಿರುವ ಗಣಪತಿ ಕಟ್ಟೆಯನ್ನು ಯಾರೋ ಕಿಡಿಗೇಡಿಗಳು ಕಲ್ಲು ಎತ್ತಿ ಹಾಕಿ ಹಾನಿಗೊಳಿಸಿರುವ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಉದನೆ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ವತಿಯಿಂದ ಶುಕ್ರವಾರದಂದು ಉದನೆ ಗಣಪತಿ ಕಟ್ಟೆಯಲ್ಲಿ ಸರಳವಾಗಿ ಗಣೇಶೋತ್ಸವ ಆಚರಿಸಲಾಗಿತ್ತು. ಗಣಪತಿ ಕಟ್ಟೆಯ ಮೆಟ್ಟಿಲನ್ನು ಬಾಳೆಗಿಡಗಳಿಂದ ಅಲಂಕರಿಸಲಾಗಿದ್ದು, ರಾತ್ರಿ ವೇಳೆ ಯಾರೋ ಕಿಡಿಗೇಡಿಗಳು ಬಾಳೆಗಿಡಗಳನ್ನು ಕಿತ್ತೆಸೆದು ಕಲ್ಲು ಎತ್ತಿಹಾಕಿ ಮೆಟ್ಟಿಲನ್ನು ಹಾನಿಗೊಳಿಸಿರುವುದು ಕಂಡುಬಂದಿದೆ. ಸ್ಥಳಕ್ಕೆ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ವಿಕಲಚೇತನ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ

 

 

 

error: Content is protected !!
Scroll to Top