ಕಡಬ: ಮಹಿಳೆ ನಾಪತ್ತೆ



(ನ್ಯೂಸ್ ಕಡಬ) newskadaba.com ಕಡಬ, ಸೆ.11. ಮನೆ ಪಕ್ಕದ ಗುಡ್ಡದ ಕಡೆಗೆ ತೆರಳಿದ ಮಹಿಳೆಯೋರ್ವರು ಮನೆಗೆ ಹಿಂತಿರುಗದೆ ನಾಪತ್ತೆಯಾಗಿರುವ ಬಗ್ಗೆ ಕಡಬ ಠಾಣೆಯಲ್ಲಿ ತಡವಾಗಿ ದೂರು ದಾಖಲಾಗಿದೆ.







ನಾಪತ್ತೆಯಾಗಿರುವ ಮಹಿಳೆಯನ್ನು ಕಡಬ ತಾಲೂಕಿನ ಹಳೆನೇರಂಕಿ ಗ್ರಾಮದ ಮಡೆಂಜಿಮಾರು ನಿವಾಸಿ ಹೊನ್ನಮ್ಮ(58) ಎಂದು ಗುರುತಿಸಲಾಗಿದೆ. ಮಾನಸಿಕ ಅಸ್ವಸ್ಥತೆಯಿಂದ ಬಳಲುತ್ತಿದ್ದ ಇವರು ಸೆಪ್ಟೆಂಬರ್ 05 ರಂದು ತನ್ನ ಮನೆಯ ಪಕ್ಕದ ಗುಡ್ಡದ ಕಡೆಗೆ ತೆರಳಿದ್ದು, ಆ ಬಳಿಕ ನಾಪತ್ತೆಯಾಗಿದ್ದಾರೆ ಎನ್ನಲಾಗಿದೆ. ಸಂಬಂಧಿಕರ ಮನೆಯಲ್ಲೆಲ್ಲಾ ಹುಡುಕಿ ಪತ್ತೆಯಾಗದ ಹಿನ್ನೆಲೆಯಲ್ಲಿ ಇದೀಗ ಆಕೆಯ ಮಗ ನೀಡಿದ ದೂರಿನಂತೆ ತಡವಾಗಿ ಪ್ರಕರಣ ದಾಖಲಾಗಿದೆ.






 

 

 

 

error: Content is protected !!
Scroll to Top