ಹಾಡುಹಗಲೇ ಮಹಿಳೆಯ ಬ್ಯಾಗ್ ಕಳವಿಗೆ ವಿಫಲ ಯತ್ನ ➤ ಪ್ರತಿರೋಧದ ವೀಡಿಯೋ ವೈರಲ್

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.12. ಕಾರಿನಲ್ಲಿ ಬಂದ ಅಪರಿಚಿತರ ತಂಡವೊಂದು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯ ಬ್ಯಾಗ್ ಕಳವಿಗೆ ಯತ್ನಿಸಿದ ಘಟನೆ ಬೆಂದೂರ್ವೆಲ್ ಸೈಂಟ್ ಆಗ್ನೇಸ್ ಕಾಲೇಜಿನ ಮುಂಭಾಗದಲ್ಲಿ ಭಾನುವಾರದಂದು ನಡೆದಿದೆ.

ಮಹಿಳೆಯೊಬ್ಬರು ಮುಖ್ಯ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ನಂಬರ್ ಪ್ಲೇಟ್ ಇಲ್ಲದ ರಿಟ್ಝ್ ಕಾರಿನಲ್ಲಿ ಬಂದ ಯುವಕರ ತಂಡದಲ್ಲಿದ್ದ ಓರ್ವ ಕಾರಿನಿಂದ ಇಳಿದು ಮಹಿಳೆಯ ಬ್ಯಾಗ್ ಕಿತ್ತುಕೊಳ್ಳಲು ಯತ್ನಿಸಿದ್ದಾನೆ. ಈ ವೇಳೆ ಮಹಿಳೆ ಪ್ರತಿರೋಧ ವ್ಯಕ್ತಪಡಿಸಿದ್ದು ಕೂಗಿಕೊಂಡಿದ್ದಾರೆ. ಆ ವೇಳೆ ಅಲ್ಲಿದ್ದ ಸಾರ್ವಜನಿಕರು ದುಷ್ಕರ್ಮಿಗಳನ್ನು ಹಿಡಿಯುವ ಪ್ರಯತ್ನ ಮಾಡಿದಾಗ ಅಪರಿಚಿತ ವ್ಯಕ್ತಿಯು ಮಹಿಳೆಯ ಕೈಯಿಂದ ತಪ್ಪಿಸಿಕೊಂಡು ಕಾರಿನಲ್ಲಿ ಪರಾರಿಯಾಗಿದ್ದಾನೆ. ಇದು ನಡೆದಿರುವುದು ಯಾವುದೋ ಕಳ್ಳತನವಲ್ಲ. ಬದಲಾಗಿ ಪೊಲೀಸ್ ಇಲಾಖೆಯಿಂದಲೇ ನಡೆದ ಅಣಕು ಕಾರ್ಯಾಚರಣೆ. ಇದೀಗ ಇದರ ವೀಡಿಯೋ ಎಲ್ಲೆಡೆ ವೈರಲ್ ಆಗಿದೆ.

 

Also Read  ರೈತ ಸಮುದಾಯಕ್ಕೆ ಗುಡ್ ನ್ಯೂಸ್        ➤ ರಾಜ್ಯಾದ್ಯಂತ 2.6 ಲಕ್ಷ ನೀರಾವರಿ ಪಂಪ್ ಸೆಟ್ ಗಳಿಗೆ ಸೌರಶಕ್ತಿ

 

 

 

error: Content is protected !!
Scroll to Top