(ನ್ಯೂಸ್ ಕಡಬ) newskadaba.com ಕಡಬ, ಸೆ.14. ನಿವೃತ್ತ ಪೋಲಿಸ್ ಹೆಡ್ ಕಾನ್ಸ್ ಸ್ಟೇಬಲ್, ರೆಂಜಿಲಾಡಿ ಗ್ರಾಮದ ಎನ್ಕಾಜೆ ನಿವಾಸಿ ಚೆನ್ನಪ್ಪ ಗೌಡ (73ವ) ಅವರು ಅಸೌಖ್ಯದಿಂದ ಮಂಗಳೂರಿನ ಫಾದರ್ ಮುಲ್ಲರ್ಸ್ ಆಸ್ಪತ್ರೆಯಲ್ಲಿ ಸೋಮವಾರದಂದು ನಿಧನರಾಗಿದ್ದಾರೆ.

ಇವರು ಬೆಳ್ಳಾರೆ, ಸುಬ್ರಹ್ಮಣ್ಯ, ಸುಳ್ಯ, ಪುತ್ತೂರು, ಬಿಸಿರೋಡು, ಕುಂದಾಪುರ ಸೇರಿದಂತೆ ಜಿಲ್ಲೆಯ ಹಲವು ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ. ಮೃತರು ಪತ್ನಿ ಚಂದ್ರಾವತಿ, ಪುತ್ರ ಹರಿಪ್ರಸಾದ್ ಅವರನ್ನು ಅಗಲಿದ್ದಾರೆ.









