ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಗೆ ಸುಳ್ಯ ಕೋರ್ಟ್‌ನಿಂದ ವಾರಂಟ್ ➤ ಏನಿದು ಪ್ರಕರಣ ಗೊತ್ತೇ..?



(ನ್ಯೂಸ್ ಕಡಬ) newskadaba.com ಸುಳ್ಯ, ಸೆ.15. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರಿಗೆ ಸುಳ್ಯದ ನ್ಯಾಯಾಲಯವು ವಾರಂಟ್ ಜಾರಿ ಮಾಡಿದ್ದು, ಸೆಪ್ಟೆಂಬರ್ 29 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚನೆ ನೀಡಿದೆ.





ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರದಲ್ಲಿ ಇಂಧನ ಸಚಿವರಾಗಿದ್ದ ಡಿಕೆಶಿ, ಹಾಗೂ ಬೆಳ್ಳಾರೆಯ ವ್ಯಕ್ತಿಯೋರ್ವರ ನಡುವೆ ವಿದ್ಯುತ್ ಸಮಸ್ಯೆಯ ಬಗ್ಗೆ ದೂರವಾಣಿ ಮೂಲಕ ವಾಗ್ವಾದ ನಡೆದಿತ್ತು. ಈ ಬಗ್ಗೆ ಡಿಕೆಶಿ ನೀಡಿದ ದೂರಿನ ಮೇರೆಗೆ ಬೆಳ್ಳಾರೆಯ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದರು. ಪ್ರಕರಣದ ಸಂಬಂಧ ನ್ಯಾಯಾಲಯಕ್ಕೆ‌ ಹಾಜರಾಗುವಂತೆ ಡಿಕೆಶಿಗೆ ಹಲವು ಬಾರಿ ಸಮನ್ಸ್ ಜಾರಿ ಮಾಡಿದ್ದರೂ ನ್ಯಾಯಾಲಯಕ್ಕೆ ಹಾಜರಾಗಿರಲಿಲ್ಲ. ಇದೀಗ ಕೋರ್ಟ್‌ಗೆ ಹಾಜರಾಗುವಂತೆ ವಾರಂಟ್ ಜಾರಿ ಮಾಡಲಾಗಿದ್ದು, ಸೆಪ್ಟೆಂಬರ್ 29 ರಂದು ಡಿಕೆಶಿ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಬೇಕಿದೆ.






 

 

 

error: Content is protected !!
Scroll to Top