ಆಧಾರ್ – ಪಾನ್ ಲಿಂಕ್ ಗೆ ಗಡುವು ವಿಸ್ತರಿಸಿದ ಕೇಂದ್ರ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.19. ಆಧಾರ್ ಕಾರ್ಡ್ ಜೊತೆಗೆ ಪ್ಯಾನ್ ಕಾರ್ಡ್ ಲಿಂಕ್ ಮಾಡಲು ನೀಡಲಾಗಿದ್ದ ಅಂತಿಮ ದಿನಾಂಕವನ್ನು ಕೇಂದ್ರ ಸರಕಾರ 2022ರ ಮಾರ್ಚ್‌ವರೆಗೆ ವಿಸ್ತರಿಸಿದೆ.

ಕೋವಿಡ್-19 ವೈರಸ್ ಹಾಗೂ ಲಾಕ್‍ಡೌನ್ ಕಾರಣದಿಂದಾಗಿ ಆಧಾರ್ ಕಾರ್ಡ್ ಮತ್ತು ಪ್ಯಾನ್ ಕಾರ್ಡ್ ನಡುವೆ ಲಿಂಕ್ ಮಾಡಲು ನಿಗದಿಪಡಿಸಲಾಗಿದ್ದ ಕೊನೆಯ ದಿನಾಂಕ ವಿಸ್ತರಣೆಗೆ ತೆರಿಗೆದಾರರಿಂದ ಮನವಿ ಬಂದಿದ್ದರಿಂದ ಅವಧಿ ವಿಸ್ತರಣೆ ಮಾಡಲಾಗಿದೆ ಎಂದು ಕೇಂದ್ರೀಯ ನೇರ ತೆರಿಗೆ ಮಂಡಳಿ (ಸಿಬಿಡಿಟಿ) ತಿಳಿಸಿದೆ. ಅಲ್ಲದೆ, ಐಟಿ ಕಾಯಿದೆಯಡಿ ದಂಡ ಪ್ರಕ್ರಿಯೆಯನ್ನು ಪೂರ್ಣಗೊಳಿಸುವ ಅಂತಿಮ ದಿನಾಂಕವನ್ನು ಸೆಪ್ಟೆಂಬರ್ 30, 2021 ರಿಂದ ಮಾರ್ಚ್ 31, 2022 ರವರೆಗೆ ವಿಸ್ತರಿಸಲಾಗಿದೆ.

 

 

 

Scroll to Top