ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ತಾಲೂಕು ಘಟಕ ಉದ್ಘಾಟನೆ ➤ ಮನೆಗೆ ದಾರಿ ಇಲ್ಲದೆ ಕಷ್ಟಪಡುತ್ತಿರುವ ಮರ್ಧಾಳದ ಸೈನಿಕ

(ನ್ಯೂಸ್ ಕಡಬ) newskadaba.com ಕಡಬ, ಸೆ.19. ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ತಾಲೂಕು ಘಟಕದ ಉದ್ಘಾಟನಾ ಸಮಾರಂಭವು ಮರ್ಧಾಳ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ. ಶಿವಣ್ಣ ಎನ್.ಕೆ. ಉದ್ಘಾಟಿಸಿ ಮಾತನಾಡಿ, ದೇಶ ಕಾಯುವ ಕಾಯಕವನ್ನು ಪ್ರಾಮಾಣಿಕತೆಯಿಂದ ನಿರ್ವಹಿಸಿ ನಿವೃತ್ತ ಜೀವನ ನಡೆಸುತ್ತಿರುವ ಮಾಜಿ ಸೈನಿಕರಿಗೆ ಸೂಕ್ತ ಸ್ಥಾನಮಾನ ಸಿಗಬೇಕಾದರೆ ನಾವೆಲ್ಲರೂ ಒಗ್ಗಟ್ಟಾಗಬೇಕು. ಸರಕಾರದಿಂದ ನಮಗೆ ಸಿಗಬೇಕಾದ ಸವಲತ್ತುಗಳಿಗಾಗಿ ನಾವು ಸಂಘಟಿತರಾಗಿ ಹೋರಾಟ ಬೇಕಾಗಿದೆ. ಮರ್ಧಾಳದ ಸೈನಿಕ ಪುರುಷೋತ್ತಮ ಅವರ ಮನೆಗೆ ಸಮರ್ಪಕವಾದ ದಾರಿ, ವಿದ್ಯುತ್ ಇಲ್ಲ. ಅವರಿಗೆ ನ್ಯಾಯ ಒದಗಿಸದಿದ್ದರೆ ಉಗ್ರ ಹೋರಾಟ ಮಾಡಲಾಗುವುದು. ಮಂಗಳೂರಿನ ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ತನಕ ಪಾದಯಾತ್ರೆ ನಡೆಸಿ ಬಳಿಕ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಲಾಗುವುದು ಎಂದರು.

Also Read  ಜ. 17ರಂದು ಲೋಕಾಯುಕ್ತರಿಂದ ಜನಸಂಪರ್ಕ ಸಭೆ

ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಕಡಬ ಘಟಕದ ಅಧ್ಯಕ್ಷ ಮ್ಯಾಥ್ಯೂ ಟಿ.ಜೆ. ಅಧ್ಯಕ್ಷತೆ ವಹಿಸಿದ್ದರು. ಸಂಘದ ಕೊಡಗು ಜಿಲ್ಲಾಧ್ಯಕ್ಷ ಸೋಮಣ್ಣ, ದ.ಕ. ಜಿಲ್ಲಾ ಘಟಕದ ಕಾರ್ಯದರ್ಶಿ ಗೋಪಾಲಕೃಷ್ಣ, ಸದಸ್ಯ ತಂಗಚ್ಚನ್, ಬೆಂಗಳೂರು ಜಿಲ್ಲಾಧ್ಯಕ್ಷ ವೇಣು, ಉಪಾಧ್ಯಕ್ಷ ವಾಸು, ಕಾರ್ಯದರ್ಶಿ ಪ್ರವೀಣ್, ಮಾಜಿ ಸೈನಿಕ ಸುಬ್ರಾಯ ಬೈಪಾಡಿತ್ತಾಯ, ಸಾಮಾಜಿಕ ಕಾರ್ಯಕರ್ತ ಅನೂಪ್ ಕುಮಾರ್ ಜೈನ್ ಉಪಸ್ಥಿತರಿದ್ದರು.

 

 

 

 

 

error: Content is protected !!
Scroll to Top