ಕರಾವಳಿ ಭಾಗದ ಹಿರಿಯ ಬಿಜೆಪಿ ಮುಖಂಡನ ಸೆಕ್ಸ್ ವೀಡಿಯೋ ವೈರಲ್ ➤ ವೀಡಿಯೋ ಬಗ್ಗೆ ಸ್ಪಷ್ಟೀಕರಣ ನೀಡಿದ ಮಾಜಿ ಮುಖ್ಯಮಂತ್ರಿ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.19. ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ಸಚಿವ, ಬಿಜೆಪಿಯ ಹಿರಿಯ ನಾಯಕ ಕರಾವಳಿ ಮೂಲದ ಡಿ.ವಿ. ಸದಾನಂದ ಗೌಡರದ್ದು ಎನ್ನಲಾದ ಸೆಕ್ಸ್ ವೀಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ಭಾನುವಾರ ಮಧ್ಯಾಹ್ನದಿಂದ ವೀಡಿಯೋ ವೈರಲ್ ಆಗಿದ್ದು, ಈ ಬಗ್ಗೆ ಸ್ವತಃ ಡಿವಿಎಸ್ ಸ್ಪಷ್ಟನೆ ನೀಡಿದ್ದಾರೆ. “ಆತ್ಮೀಯ ಹಿತೈಷಿಗಳೇ..
ನನ್ನ ಮಾರ್ಫ್ ಮಾಡಿದ (ನಕಲಿ) ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ. ಆ ವಿಡಿಯೋದಲ್ಲಿ ಇರುವುದು ನಾನಲ್ಲ, ನನ್ನ ತೇಜೋವಧೆ ಮಾಡುವ ಉದ್ದೇಶದಿಂದ ಆ ವಿಡಿಯೋ ಸೃಷ್ಟಿಸಲಾಗಿದೆ ಎಂದು ತಿಳಿಸಲು ಬಯಸುತ್ತೇನೆ.


ಆ ಕುರಿತು ನಾನು ಸೈಬರ್ ಕ್ರೈಂ ಪೊಲೀಸರಿಗೂ ದೂರು ನೀಡಿದ್ದೇನೆ. ಅಪರಾಧಿಗಳನ್ನು ಶೀಘ್ರವೇ ಬಂಧಿಸಲಾಗುವುದು ಎಂಬ ಬಗ್ಗೆ ನನಗೆ ನಂಬಿಕೆ ಇದೆ. ಇನ್ನು ಆ ವಿಡಿಯೋ ಅಪ್​ಲೋಡ್ ಅಥವಾ ಫಾರ್ವರ್ಡ್ ಮಾಡದಂತೆ ನ್ಯಾಯಾಲಯದ ತಡೆಯಾಜ್ಞೆ ಇದೆ, ಮಾತ್ರವಲ್ಲ ಅಂಥವರು ಶಿಕ್ಷೆಗೂ ಗುರಿಯಾಗುತ್ತಾರೆ. ಅದಾಗ್ಯೂ ಯಾರಾದರೂ ಹಾಗೆ ಮಾಡಿದರೆ ದಯವಿಟ್ಟು ನನ್ನ ಗಮನಕ್ಕೆ ತನ್ನಿ” ಎಂಬುದಾಗಿ ಸದಾನಂದ ಗೌಡ ಅವರು ಸೋಷಿಯಲ್ ಮೀಡಿಯಾದಲ್ಲಿ ಕೋರಿಕೊಂಡಿದ್ದಾರೆ.

Also Read  ಸಂಭೋಗಕ್ಕೆ ಸಮ್ಮತಿಸದ ಯುವತಿ- ಸ್ಕ್ರೂ ಡ್ರೈವರ್ ನಿಂದ ಚುಚ್ಚಿ ಹಲ್ಲೆ ಮಾಡಿದ ಯುವಕ

 

 

 

error: Content is protected !!
Scroll to Top