ಕಡಬ: ಕಾಲೇಜು ವಿದ್ಯಾರ್ಥಿ ನಾಪತ್ತೆ ➤ ಅಪಹರಣ ಶಂಕೆ

(ನ್ಯೂಸ್ ಕಡಬ) newskadaba.com ಕಡಬ, ಸೆ.22. ಇಲ್ಲಿನ ರಾಮಕುಂಜೇಶ್ವರ ವಸತಿ ನಿಲಯದಲ್ಲಿದ್ದ ವಿದ್ಯಾರ್ಥಿಯೋರ್ವ ಕಾಲೇಜಿಗೂ ಹೋಗದೆ, ಮನೆಗೂ ತೆರಳದೆ ನಾಪತ್ತೆಯಾಗಿರುವ ಘಟನೆ ಮಂಗಳವಾರದಂದು ನಡೆದಿದ್ದು, ಈ ಬಗ್ಗೆ ಬಾಲಕ ಅಪಹರಣ ಆಗಿರುವ ಸಾಧ್ಯತೆ ಬಗ್ಗೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರಾಮಕುಂಜೇಶ್ವರ ಕಾಲೇಜಿನಲ್ಲಿ ಪ್ರಥಮ ಪಿಯುಸಿ ವ್ಯಾಸಂಗ ಮಾಡುತ್ತಿದ್ದ ಚಿಕ್ಕಮಗಳೂರು ನಿವಾಸಿ ಅಂಜನ್ ಸಿ.ಎಂ. ಎಂಬಾತ ಮಂಗಳವಾರದಂದು ಕಾಲೇಜಿಗೆ ತೆರಳದೆ ಹಾಸ್ಟೆಲ್ ನಿಂದ ನಾಪತ್ತೆಯಾಗಿದ್ದು, ಈ ಬಗ್ಗೆ ಆತನ ಮನೆಯಲ್ಲಿ ಹಾಗೂ ಸಂಬಂಧಿಕರ ಮನೆಯಲ್ಲಿ ವಿಚಾರಿಸಲಾಗಿ ಪತ್ತೆಯಾಗದ ಹಿನ್ನೆಲೆಯಲ್ಲಿ ಇದೀಗ ಅಂಜನ್ ನನ್ನು ಅಪಹರಿಸಿರಬಹುದು ಎಂಬ ಸಂಶಯ ವ್ಯಕ್ತಪಡಿಸಿ ಹಾಸ್ಟೆಲ್ ಮ್ಯಾನೇಜರ್ ಕಡಬ ಠಾಣೆಗೆ ದೂರು ನೀಡಿದ್ದಾರೆ.

Also Read  ಬಿಎಂಟಿಸಿ ಬಸ್ ಹರಿದು ಯುವಕ ಮೃತ್ಯು

 

 

 

error: Content is protected !!
Scroll to Top