ಕುಮಾರಧಾರ ನದಿಯಲ್ಲಿ ಮುಳುಗಿದ್ದ ವ್ಯಕ್ತಿಯ ಮೃತದೇಹ ಪತ್ತೆ ➤ ಸ್ನಾನಕ್ಕೆಂದು ತೆರಳಿದ್ದ ವೇಳೆ ನಡೆದಿದ್ದ ಘಟನೆ

(ನ್ಯೂಸ್ ಕಡಬ) newskadaba.com ಕಡಬ, ಸೆ.23. ಸ್ನಾನಕ್ಕೆಂದು ನದಿ ತೀರಕ್ಕೆ ತೆರಳಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹವು ಗುರುವಾರದಂದು ಪತ್ತೆಯಾಗಿದೆ.

ನಾಪತ್ತೆಯಾದ ವ್ಯಕ್ತಿಯನ್ನು ಕಡಬ ತಾಲೂಕು ಕೊಯಿಲ ಗ್ರಾಮದ ಪರಂಗಾಜೆ ನಿವಾಸಿ‌ ಚಂದಪ್ಪ ಗೌಡ(67) ಎಂದು ಗುರುತಿಸಲಾಗಿದೆ. ಇವರು ಮಂಗಳವಾರದಂದು ಮನೆ ಸಮೀಪ ಹರಿಯುತ್ತಿರುವ ಕುಮಾರಧಾರ ನದಿಗೆ ಸ್ನಾನಕ್ಕೆಂದು ಹೋದವರು ಕಾಣೆಯಾಗಿದ್ದರು. ಈ ಬಗ್ಗೆ ಮೃತರ ಪುತ್ರಿ ನೀಡಿದ ದೂರಿನಂತೆ ಕಡಬ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂದು ಮೃತದೇಹವು ಪರಂಗಾಜೆ ಸಮೀಪ ದೊರೆತಿದೆ.

 

 

 

Scroll to Top