ratutogel ratutogel gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 gatsu88 ratutogel ratutogel ratutogel ratutogel ratutogel ratutogel ratutogel ratutogel
ಅಪಘಾತ ಸ್ಥಳಕ್ಕೆ ತೆರಳಿದ್ದ ಅಂಬ್ಯುಲೆನ್ಸ್ ಚಾಲಕನಿಗೆ ಹಲ್ಲೆಗೆ ಯತ್ನ ➤ ಧರ್ಮಸ್ಥಳ ಠಾಣೆಗೆ ದೂರು – News Kadaba

ಅಪಘಾತ ಸ್ಥಳಕ್ಕೆ ತೆರಳಿದ್ದ ಅಂಬ್ಯುಲೆನ್ಸ್ ಚಾಲಕನಿಗೆ ಹಲ್ಲೆಗೆ ಯತ್ನ ➤ ಧರ್ಮಸ್ಥಳ ಠಾಣೆಗೆ ದೂರು

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಸೆ.23. ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾದ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆ ನಿಮಿತ್ತ ಬಂದ ಅಂಬ್ಯುಲೆನ್ಸ್ ನ ಕೀ ಕಿತ್ತುಕೊಂಡು ಚಾಲಕನಿಗೆ ಹಲ್ಲೆ ನಡೆಸಲು ಮುಂದಾದ ಘಟನೆ ಉದನೆಯಿಂದ ವರದಿಯಾಗಿದೆ.

ಧರ್ಮಸ್ಥಳದಿಂದ ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ಕೆಎಸ್ಸಾರ್ಟಿಸಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಉದನೆ ಸಮೀಪ ಹೊಳೆ ಬದಿಗೆ ಉರುಳಿ ಬಿದ್ದಿತ್ತು‌. ಘಟನೆಯಲ್ಲಿ ಹಲವರು ಗಾಯಗೊಂಡಿದ್ದು, ಈ ವೇಳೆ ರಕ್ಷಣಾ ಕಾರ್ಯಾಚರಣೆಗೆಂದು ಅಂಬ್ಯುಲೆನ್ಸ್ ಬಂದಿದ್ದು, ಸ್ಥಳೀಯ ನಿವಾಸಿ ಲಿಬಿನ್ ಎಂಬಾತ ಅಂಬ್ಯುಲೆನ್ಸ್ ವಾಹನದ ಕೀಯನ್ನು ಕಸಿದುಕೊಂಡು ಹಲ್ಲೆ ನಡೆಸಲು ಯತ್ನಿಸಿರುವುದಾಗಿ ಅಂಬ್ಯುಲೆನ್ಸ್ ಚಾಲಕ ನವಾಝ್ ಧರ್ಮಸ್ಥಳ ಠಾಣೆಗೆ ದೂರು ನೀಡಿದ್ದಾರೆ.

 

 

 

Scroll to Top