ನಾಳೆ (ಸೆ.27) ಭಾರತ ಬಂದ್ ➤ ರಾಜ್ಯದಲ್ಲೂ ವಿವಿಧ ಸಂಘಟನೆಗಳಿಂದ ಬೆಂಬಲ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.26. ಕೃಷಿ ಕಾಯ್ದೆಗಳಿಗೆ ಕೇಂದ್ರ ಸರಕಾರ ತಂದಿರುವ ತಿದ್ದುಪಡಿ ವಿರೋಧಿಸಿ ‘ಸಂಯುಕ್ತ ಕಿಸಾನ್ ಮೋರ್ಚಾ’ ನಾಳೆ (ಸೆ.27) ಕರೆ ನೀಡಿರುವ ಭಾರತ್ ಬಂದ್‍ಗೆ ರಾಜ್ಯದಲ್ಲೂ ವಿವಿಧ ಸಂಘಟನೆಗಳಿಂದ ಬೆಂಬಲ ವ್ಯಕ್ತವಾಗಿದೆ.

ನಾಳೆ ಬೆಳಗ್ಗೆ 6ರಿಂದ ಸಂಜೆ 6 ಗಂಟೆಯ ವರೆಗೆ ಬಂದ್ ನಡೆಯಲಿದ್ದು, ಬಸ್, ರೈಲು ಸಂಚಾರ ತಡೆಯಲಾಗುವುದು. ಹೆದ್ದಾರಿಗಳನ್ನೂ ಬಂದ್ ಮಾಡಲಾಗುವುದು ಎಂದು ರೈತ, ದಲಿತ ಮತ್ತು ಎಡಪಕ್ಷಗಳ ಸಂಘಟನೆಯ ಮುಖಂಡರು ತಿಳಿಸಿದ್ದಾರೆ. ಇನ್ನು ನಗರ ಪ್ರದೇಶಗಳಲ್ಲಿ ಅಗತ್ಯ ಸೇವೆಗಳನ್ನು ಹೊರತುಪಡಿಸಿ, ಬಹುತೇಕ ಎಲ್ಲಾ ಕಾರ್ಯ ಚಟುವಟಿಕೆಗಳು ಸ್ತಬ್ಧಗೊಳ್ಳಲಿದೆ ಎಂದು ಹೇಳಲಾಗುತ್ತಿದೆ.

Also Read  ಕಾಸರಗೋಡು: ವಿದ್ಯಾರ್ಥಿನಿ ಮೃತಪಟ್ಟ ಪ್ರಕರಣ        ➤  ಇಲಿಪಾಷಣ ಸೇವಿಸಿ ಮೃತ್ಯು ಎಂದು ದೃಢ.!

ರೈತ ಸಂಘಟನೆಗಳು, ದಲಿತ, ಕಾರ್ಮಿಕ, ಕನ್ನಡ ಪರ ಸಂಘಟನೆಗಳು ಬಂದ್ ಯಶಸ್ವಿಗೊಳಿಸಲು ಮನವಿ ಮಾಡಿದ್ದು, ಕೆಲವು ರಾಜಕೀಯ ಪಕ್ಷಗಳು ಕೂಡಾ ಬೆಂಬಲ ವ್ಯಕ್ತಪಡಿಸಿವೆ.

 

 

 

error: Content is protected !!
Scroll to Top