ಚಲಿಸುತ್ತಿದ್ದ ಕಾರಿನ ಟಯರ್ ಸ್ಫೋಟ ➤ ತಾತ – ಮೊಮ್ಮಗ ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ.27. ಚಲಿಸುತ್ತಿದ್ದ ಕಾರಿನ ಚಕ್ರ ಸ್ಫೋಟಗೊಂಡ ಪರಿಣಾಮ ಕಾರು ಪಲ್ಟಿಯಾಗಿ ತಾತ – ಮೊಮ್ಮಗ ಸ್ಥಳದಲ್ಲೇ ಮೃತಪಟ್ಟ ಘಟನೆ ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

ಮೃತರನ್ನು ಗಂಗಾವತಿ ಮೂಲದ ಮಹಮ್ಮದ್ ಸಾಬ್(65) ಹಾಗೂ ಮಹಮ್ಮದ್ ಯೂಸುಫ್ (8) ಎಂದು ಗುರುತಿಸಲಾಗಿದೆ. ಬೆಂಗಳೂರಿನ ಭೈರತಿಯಲ್ಲಿ ವಾಸವಾಗಿದ್ದ ಇವರು ಜಾವಗಲ್ ಕಡೆಗೆ ಪ್ರಯಾಣಿಸುತ್ತಿದ್ದ ವೇಳೆ ಟಯರ್ ಸ್ಫೋಟಗೊಂಡು ಈ ದುರ್ಘಟನೆ ಸಂಭವಿಸಿದೆ. ನೆಲಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Also Read  ವಿಧಾನಪರಿಷತ್ ಚುನಾವಣೆ- ಬೀದರ್ ನಲ್ಲಿ ಜಯಗಳಿಸಿದ ಕಾಂಗ್ರೆಸ್ ಅಭ್ಯರ್ಥಿ ಭೀಮರಾವ್ ಪಾಟೀಲ

 

 

 

error: Content is protected !!
Scroll to Top