(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.31. ಪೊಲೀಸ್ ಮಹಾ ನಿರ್ದೇಶಕರ ಹುದ್ದೆಗೆ ನೀಲಮಣಿ ರಾಜು ಆಯ್ಕೆ ಆಗಿದ್ದು, ಈ ಮೂಲಕ ಕರ್ನಾಟಕ ರಾಜ್ಯದ ಮೊದಲ ಮಹಿಳಾ ಅಧಿಕಾರಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ನೂತನ ರಾಜ್ಯ ಪೊಲೀಸ್ ಮಹಾನಿರ್ದೇಶಕ ಹುದ್ದೆಗೆ ಮೂವರು ಹಿರಿಯ ಅಧಿಕಾರಿಗಳ ಮಧ್ಯೆ ತೀವ್ರ ಪೈಪೋಟಿ ನಡೆಯುತ್ತಿದ್ದು, ಕೊನೆಗೂ ಮಹಿಳಾ ಅಧಿಕಾರಿಯೊಬ್ಬರು ಡಿಜಿ-ಐಜಿಪಿಯಾಗಿ ಆಯ್ಕೆಯಾಗಿದ್ದಾರೆ.
ಈಗಾಗಲೇ ಕರ್ನಾಟಕದ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿ ಆಯ್ಕೆಯಾಗಿರುವ ನೀಲಮಣಿ ಎನ್.ರಾಜು 1983ರ ಬ್ಯಾಚ್’ನ ಐಪಿಎಸ್ ಅಧಿಕಾರಿಯಾಗಿದ್ದು, 23 ವರ್ಷಗಳ ಕಾಲ ಕೇಂದ್ರ ಸೇವೆಯಲ್ಲಿ ಸೇವೆ ಸಲ್ಲಿಸಿದ್ದರು. ಉತ್ತರ ಪ್ರದೇಶದ ರೂರ್ಕಿ ಮೂಲದವರಾದ ಇವರು ಎಂಬಿಎ, ಎಂ.ಫಿಲ್ ಪದವೀಧರೆಯಾಗಿದ್ದು ಇವರ ಸೇವಾವಧಿಯು 2020ರ ಜನವರಿ ತಿಂಗಳವರೆಗೆ ಇರಲಿದೆ.