ಮಂಗಳೂರು: ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಯತ್ನ; ನೈತಿಕ ಪೊಲೀಸ್ ಗಿರಿಗೆ ಕಡಿವಾಣ ಹಾಕಲು ಬಿಜೆಪಿ ಸರಕಾರ ವಿಫಲ ➤ ಶೌವಾದ್ ಗೂನಡ್ಕ

(ನ್ಯೂಸ್ ಕಡಬ) Newskadaba.com ಮಂಗಳೂರು, ಸೆ. 29. ಮಲ್ಪೆಗೆ ಪ್ರವಾಸಕ್ಕೆಂದು ತೆರಳಿದ್ದ ವಿದ್ಯಾರ್ಥಿಗಳನ್ನು ಸುರತ್ಕಲ್ ಎನ್.ಐ.ಟಿ.ಕೆ ಟೋಲ್ ಗೇಟ್ ಬಳಿ ತಡೆದು ಗೂಂಡಾಗಳು ಹಲ್ಲೆಗೆ ಮುಂದಾಗಿರುವುದು ದ.ಕ.ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಹದೆಗೆಟ್ಟಿರುವುದಕ್ಕೆ ಸಾಕ್ಷಿಯಾಗಿದೆ. ನೈತಿಕ ಪೊಲೀಸ್ ಗಿರಿಗೆ ಕುಖ್ಯಾತಿಯನ್ನು ಪಡೆದ ಮಂಗಳೂರಿನಲ್ಲೇ ಮತ್ತೊಮ್ಮೆ ಇಂತಹ ಘಟನೆ ನಡೆದಿರುವುದು ನಾಗರಿಕ ಸಮಾಜ ತಲೆತಗ್ಗಿಸುವಂತಹ ವಿಚಾರವಾಗಿದ್ದು, ವಿದ್ಯಾರ್ಥಿಗಳ ಮೇಲೆ ಹಲ್ಲೆಗೆ ಮುಂದಾದ ತಪ್ಪಿತಸ್ಥರ ವಿರುದ್ಧ ಸರ್ಕಾರವು ಕಠಿಣ ಕ್ರಮ ತೆಗೆದುಕೊಳ್ಳಬೇಕೆಂದು ಕೆ.ಪಿ.ಸಿ.ಸಿ.ಮಾಧ್ಯಮ ವಕ್ತಾರರಾದ ಶೌವಾದ್ ಗೂನಡ್ಕರವರು ಆಗ್ರಹಿಸಿದ್ದಾರೆ.

 


‍ವಿದ್ಯಾರ್ಥಿಗಳಿಂದ ತಪ್ಪುಗಳುಂಟಾಗಿದ್ದಲ್ಲಿ ಕಾನೂನಿನ ಚೌಕಟ್ಟಿನೊಳಗೆ ಅದನ್ನು ಪ್ರಶ್ನಿಸಬೇಕು, ಅದು ಬಿಟ್ಟು ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆಗೆ ಮುಂದಾಗಿರುವುದು ಸರಿಯಲ್ಲ, ಇತ್ತೀಚೆಗೆ ಬೆಂಗಳೂರಿನಲ್ಲಿ ಕೂಡಾ ಇಂತಹ ನೈತಿಕ ಪೊಲೀಸ್ ಗಿರಿಯ ಘಟನೆ ನಡೆದಿದ್ದರೂ ರಾಜ್ಯ ಸರ್ಕಾರ ಎಚ್ಚೆತ್ತುಕೊಳ್ಳದ ಪರಿಣಾಮವಾಗಿ ಮಂಗಳೂರಿನಲ್ಲಿ ಇಂತಹ ಘಟನೆಗಳು ನಡೆಯಲು ಕಾರಣವಾಗಿದೆ. ರಾಜ್ಯ ಗೃಹ ಸಚಿವರ ಬೇಜವಾಬ್ದಾರಿ ಹೇಳಿಕೆ ಹಾಗೂ ನಡೆಗಳಿಂದ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುತ್ತಿದೆ ಎಂದು ಶೌವಾದ್ ಗೂನಡ್ಕರವರು ಆರೋಪಿಸಿದ್ದಾರೆ.

Also Read  ಅಮೆರಿಕಾದ ಪ್ರತಿಷ್ಠಿತ ನೌಕಾಪಡೆ ಕಾಲೇಜು ಪ್ರತಿನಿಧಿಯಾಗಿ ಕೊಡಗಿನ ಲೆ.ಕಮಾಂಡರ್ ಸೂರಜ್ ಅಯ್ಯಪ್ಪ ಆಯ್ಕೆ

error: Content is protected !!
Scroll to Top