ಐಪಿಎಲ್: ವಿಜಯದ ಪತಾಕೆ ಹಾರಿಸಿದ RCB

(ನ್ಯೂಸ್ ಕಡಬ) newskadaba.com ದುಬೈ, ಸೆ.29. ಐಪಿಎಲ್ ನ 43ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್’ಸಿಬಿ) ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 7 ವಿಕೆಟ್ ಗಳ ಅಂತರದಿಂದ ಗೆಲುವು ಸಾಧಿಸಿದೆ.

ಬುಧವಾರ ನಡೆದ ಪಂದ್ಯದಲ್ಲಿ ಗೆಲ್ಲಲು 150 ರನ್ ಗುರಿ ಬೆನ್ನಟ್ಟಿದ ಆರ್ ಸಿಬಿ 17.1 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 153 ರನ್ ಗಳಿಸಿತು. ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಅರ್ಧಶತಕದ ಸಹಾಯದಿಂದ ಆರ್’ಸಿಬಿ ಜಯವನ್ನು ದಾಖಲಿಸಿತು. ಇನಿಂಗ್ಸ್ ಆರಂಭಿಸಿದ ನಾಯಕ ವಿರಾಟ್ ಕೊಹ್ಲಿ ಹಾಗೂ ದೇವದತ್ತ ಪಡಿಕ್ಕಲ್ ಜೊತೆಯಾಟ ನಡೆಸಿ ಉತ್ತಮ ಆರಂಭವನ್ನು ನೀಡಿದರು. ಮಧ್ಯಮ ಕ್ರಮಾಂಕದಲ್ಲಿ ಆಲ್ ರೌಂಡರ್ ಗ್ಲೆನ್ ಮ್ಯಾಕ್ಸ್ ವೆಲ್ ಹಾಗೂ ಶ್ರೀಕರ್ ಭರತ್ ಅರ್ಧಶತಕದ ಜೊತೆಯಾಟದಿಂದ ತಂಡವನ್ನು ಮುನ್ನಡೆಸಿದರು.

Also Read  ➤ಫುಟ್‌ಬಾಲ್‌ನಲ್ಲಿ ಗಿನ್ನಿಸ್ ದಾಖಲೆ ಬರೆದ ಮಂಗಳೂರಿನ ಯುವಕ ಮೊಹಮ್ಮದ್ ಶಲೀಲ್

 

 

 

error: Content is protected !!
Scroll to Top