ಎಸ್ಸೆಸ್ಸೆಲ್ಸಿ ಪಾಸಾದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ➤ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನ

ಸಾಂದರ್ಭಿಕ ಚಿತ್ರ

ಬೆಂಗಳೂರು, ಸೆ.30. ಎಸ್ಸೆಸ್ಸೆಲ್ಸಿ ಸಿಬಿಎಸ್‍ಸಿ/ ಐಸಿಎಸ್‍ಸಿ ವಾರ್ಷಿಕ ಪರೀಕ್ಷೆಯಲ್ಲಿ 2019-20 ಹಾಗೂ 21 ನೇ ಸಾಲಿನಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನ ಮಂಜೂರು ಮಾಡಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿ ಶೇ.60 ಕ್ಕಿಂತ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳು ಅರ್ಜಿ ನಮೂನೆಯೊಂದಿಗೆ ವ್ಯಾಸಂಗ ಮಾಡಿದ ಶಾಲೆಯಿಂದ ದೃಢೀಕರಿಸಿದ ಅಂಕಪಟ್ಟಿ, ಜಾತಿ ದೃಢೀಕರಣ ಪ್ರಮಾಣ ಪತ್ರ, ವಿದ್ಯಾರ್ಥಿಯ ಬ್ಯಾಂಕ್ ಪಾಸ್ ಪುಸ್ತಕದ ಜೆರಾಕ್ಸ್ ಪ್ರತಿ, ಆಧಾರ್ ಕಾರ್ಡ್ ಪ್ರತಿಗಳೊಂದಿಗೆ ಅರ್ಜಿ ಸಲ್ಲಿಸಬೇಕು.
ಅರ್ಜಿಯನ್ನು ಇಲಾಖಾ ವೆಬ್‍ಸೈಟ್ www.sw.kar.nic.in ನಲ್ಲಿ ಸಲ್ಲಿಸುವಂತೆ ಪ್ರಕಟಣೆ ತಿಳಿಸಿದೆ.

Also Read  ಈ 5 ವಸ್ತುಗಳು ಮನೆಯಲ್ಲಿ ಇದ್ದರೆ ನಿಮ್ಮ ಜೀವನದ ಯಾವುದೇ ಸಮಸ್ಯೆಗಳಿದ್ದರೂ ಶಾಶ್ವತ ಪರಿಹಾರ ಆಗುತ್ತದೆ

 

 

 

error: Content is protected !!
Scroll to Top