ಶಂಕಿತ ರೇಬೀಸ್ ವೈರಸ್‌ ಗೆ ಕಾಲೇಜು ವಿದ್ಯಾರ್ಥಿನಿ ಬಲಿ ➤ ಹುಚ್ಚುನಾಯಿ ಕಡಿತಕ್ಕೆ ಬಲಿಯಾಗಿದ್ದ ಈಕೆಯ ಮನೆಯ ಸಾಕು ನಾಯಿ

(ನ್ಯೂಸ್ ಕಡಬ) newskadaba.com ಕಡಬ, ಅ.02. ಹುಚ್ಚುನಾಯಿಯ ವೈರಸ್‌ಗೆ ತುತ್ತಾಗಿ ಶಾಲಾ ವಿದ್ಯಾರ್ಥಿನಿ ಮೃತಪಟ್ಟ ಘಟನೆ ಕಡಬದ ಆಲಂಕಾರಿನಲ್ಲಿ ಸಂಭವಿಸಿದೆ.

ಮೃತಳನ್ನು ಕಡಬ ಸರಕಾರಿ ಪದವಿ ಪೂರ್ವ ಕಾಲೇಜಿನ ದ್ವಿತೀಯ ಪಿಯು ವಿದ್ಯಾರ್ಥಿನಿ, ಆಲಂಕಾರು ಗ್ರಾಮದ ಕೆದಿಲ ನಿವಾಸಿ ವರ್ಗಿಸ್ ಎಂಬವರ ಪುತ್ರಿ ವಿನ್ಸಿ ಸಾರಮ್ಮ (17) ಎಂದು ಗುರುತಿಸಲಾಗಿದೆ. ಗುರುವಾರ ಬೆಳಿಗ್ಗೆ ಇದ್ದಕ್ಕಿದ್ದಂತೆ ತಲೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ನೀಡಲಾಗಿದ್ದು, ಸಂಜೆ ವೇಳೆ ತಲೆನೋವು ಉಲ್ಬಣಗೊಂಡಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರು ಖಾಸಗಿ ಆಸ್ಪತ್ರೆಗೆ ಸೇರಿಸಿ ಬಳಿಕ ಮಂಗಳೂರು ಜಿಲ್ಲಾಸ್ಪತ್ರೆಗೆ ಸೇರಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ತಡ ರಾತ್ರಿ ಮೃತಪಟ್ಟಿರುವುದಾಗಿ ತಿಳಿದುಬಂದಿದೆ.

Also Read  ವಲಿಯುಲ್ಲಾಹಿ ದರ್ಗಾ ಶರೀಫ್ ಪೇರಡ್ಕ ಉರೂಸ್ ಸಮಾರಂಭ ಮತ್ತು ಸರ್ವಧರ್ಮ ಸಮ್ಮೇಳನ

ಸುಮಾರು 4 ತಿಂಗಳ ಹಿಂದೆ ಆಲಂಕಾರು ಪೇಟೆ ಸೇರಿದಂತೆ ಮೃತಳ ಮನೆಯ ಸುತ್ತಮುತ್ತ ಹುಚ್ಚು ನಾಯಿ ದಾಳಿ ಮಾಡಿದ್ದು, ಈ ವೇಳೆ ಅಲಂಕಾರು ಪೇಟೆಯಲ್ಲಿರುವ ಬೀದಿ ನಾಯಿ ಸೇರಿದಂತೆ ಇಬ್ಬರ ಮೇಲೆ ದಾಳಿ ನಡೆಸಿತ್ತು. ಮೃತಳ ಮನೆಯ ನಾಯಿಯು ಕೆಲವು ತಿಂಗಳುಗಳ ಹಿಂದೆ ರೇಬೀಸ್‌ಗೆ ಒಳಗಾಗಿ ಸಾವನ್ನಪ್ಪಿತ್ತು. ಅದೇ ನಾಯಿಯ ವೈರಸ್ ವಿದ್ಯಾರ್ಥಿನಿಗೂ ತಗಲಿರ ಬಹುದೆಂದು ಶಂಕಿಸಲಾಗಿದೆ.

 

 

 

error: Content is protected !!
Scroll to Top