ಕಡಬ: ಕೋಳಿ ಊಟ ಸೇವಿಸಿ ಹಲವರ ಆರೋಗ್ಯದಲ್ಲಿ ಏರುಪೇರು ➤ ಚಿಕಿತ್ಸೆ ಫಲಿಸದೆ ಓರ್ವ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಅ.02. ಕೋಳಿ ಊಟ ಸೇವಿಸಿದ ಜನರಲ್ಲಿ ಒರ್ವ ಮೃತಪಟ್ಟು, ಹಲವರ ಆರೋಗ್ಯದಲ್ಲಿ ಏರುಪೇರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ತಾಲೂಕಿನ ಬಲ್ಯ ಸಮೀಪದ ಗಾಣದಕೊಟ್ಟಿಗೆ ಎಂಬಲ್ಲಿ ಸಂಭವಿಸಿದೆ.

ಮೃತ ವ್ಯಕ್ತಿಯನ್ನು ಗಾಣದ ಕೊಟ್ಟಿಗೆ ನಿವಾಸಿ ದೇವಪ್ಪ ಗೌಡ (60.ವ) ಎಂದು ಗುರುತಿಸಲಾಗಿದೆ. ದೇವಪ್ಪ ಗೌಡರವರು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಡಿ ಕೂಲಿ ಕೆಲಸ ಮಾಡಲು ಇತರ ಸದಸ್ಯರೊಂದಿಗೆ ಬಲ್ಯದ ಸಂಜೀವ ದೇವಾಡಿಗರವರ ಮನೆಗೆ ಹೋಗಿದ್ದರು. ಅಲ್ಲಿ ಮಧ್ಯಾಹ್ನದ ಊಟಕ್ಕೆ ಮಾಡಲಾಗಿದ್ದ ಕೋಳಿ ಪದಾರ್ಥ ಸೇವಿಸಿದ್ದರು. ಬಳಿಕ ಸಂಜೆಯವರೆಗೆ ಸಂಜೀವ ದೇವಾಡಿಗರ ಮನೆಯಲ್ಲೇ ಕೂಲಿ ಕೆಲಸ ಮಾಡಿ ಸಂಜೆ ಮನೆಗೆ ಬಂದ ವೇಳೆ ದೇವಪ್ಪ ಗೌಡರಿಗೆ ವಾಂತಿ ಹಾಗೂ ಹೊಟ್ಟೆ ನೋವು ಉಂಟಾಗಿದ್ದರಿಂದ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ಒಳರೋಗಿಯಾಗಿ ದಾಖಲು ಮಾಡಲಾಗಿತ್ತು. ಸಂಜೀವ ದೇವಾಡಿಗರ ಮನೆಯಲ್ಲಿ ಊಟ ಮಾಡಿದ ಆನಂದ ಗೌಡ, ಸಂಜೀವ ದೇವಾಡಿಗರ ಪತ್ನಿ ಗೀತಾ ಮತ್ತು ಮಕ್ಕಳಾದ ಶ್ರೇಯಾ, ಶ್ರಾವಣರವರಿಗೂ ಸಹ ವಾಂತಿ ಹಾಗೂ ಹೊಟ್ಟೆ ನೋವು ಉಂಟಾಗಿದ್ದರಿಂದ ಅವರನ್ನೂ ನೆಲ್ಯಾಡಿ ಆಸ್ಪತ್ರೆಗೆ ದಾಖಲಾಗಿತ್ತು. ಆದರೆ ದೇವಪ್ಪ ಗೌಡರ ಆರೋಗ್ಯದಲ್ಲಿ ಏರುಪೇರಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಶುಕ್ರವಾರದಂದು ಮೃತಪಟ್ಟಿದ್ದಾರೆ.

Also Read  ಉಪ್ಪಿನಂಗಡಿ: ಅಂಗನವಾಡಿ ಕೇಂದ್ರದ ಬಳಿ ಅಪಾಯಕಾರಿ ವಿದ್ಯುತ್ ತಂತಿ ಸಂಪರ್ಕ ➤ ಎಸ್.ಡಿ.ಪಿ.ಐ ಪೆರಿಯಡ್ಕ ಬ್ರಾಂಚ್ ವತಿಯಿಂದ ಮೆಸ್ಕಾಂ ಮನವಿ

ಈ ಬಗ್ಗೆ ಮೃತರ ಪುತ್ರಿ ನೀಡಿದ ದೂರಿನಂತೆ ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 

error: Content is protected !!
Scroll to Top