ಜೇಸಿಐ ಕಡಬ ಕದಂಬ ಘಟಕದ ಜೇಸಿ ಸಪ್ತಾಹ ಕದಂಬೋತ್ಸವ – 2021 ➤ ಸೈಂಟ್ ಜೋಕಿಮ್ಸ್ ಕಾಲೇಜಿನಲ್ಲಿ ಪರಿಸರ ಸಂರಕ್ಷಣೆಯ ಮಾಹಿತಿ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಅ.04. ಜೇಸಿಐ ಕಡಬ ಕದಂಬ, ಜೇಸಿಐ ಕಡಬ ಕದಂಬ ಚಾರಿಟೇಬಲ್ ಟ್ರಸ್ಟ್ ಹಾಗೂ ಜೂನಿಯರ್ ಜೇಸಿ ವಿಭಾಗದ ವತಿಯಿಂದ ಜೇಸಿ ಸಪ್ತಾಹ 2021 ಕದಂಬೋತ್ಸವದ ಅಂಗವಾಗಿ ಪರಿಸರ ಸಂರಕ್ಷಣೆ ನಮ್ಮ ಕರ್ತವ್ಯ ಎಂಬ ಕಾರ್ಯಕ್ರಮವು ಕಡಬದ ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಸಭಾಂಗಣದಲ್ಲಿ ಸೋಮವಾರದಂದು ನಡೆಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಘಟಕಾಧ್ಯಕ್ಷ ತಿರುಮಲೇಶ್ ಭಟ್ ವಹಿಸಿದ್ದರು. ಸೈಂಟ್ ಜೋಕಿಮ್ಸ್ ವಿದ್ಯಾಸಂಸ್ಥೆಯ ಸಂಚಾಲಕರಾದ ರೆ|ಫಾ| ಅರುಣ್ ವಿಲ್ಸನ್ ಲೋಬೋ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಸಂಪನ್ಮೂಲ ವ್ಯಕ್ತಿಯಾಗಿ ನಿವೃತ್ತ ಜಿಲ್ಲಾ ಅರಣ್ಯಾಧಿಕಾರಿ ಬಿ.ಸದಾಶಿವ ಭಟ್ ಭಾಗವಹಿಸಿ ಪರಿಸರ ಸಂರಕ್ಷಣೆಯ ಬಗ್ಗೆ ವಿದ್ಯಾರ್ಥಿಗಳಿಗೆ ಮಾಹಿತಿ ನೀಡಿದರು. ವೇದಿಕೆಯಲ್ಲಿ ಸೈಂಟ್ ಜೋಕಿಮ್ಸ್ ವಿದ್ಯಾ ಸಂಸ್ಥೆಯ ಹಿರಿಯ ಉಪನ್ಯಾಸಕ ಮ್ಯಾಥ್ಯೂ ಇ.ಜೆ., ಜೂನಿಯರ್ ಜೇಸಿ ಅಧ್ಯಕ್ಷ ಮಹಮ್ಮದ್ ಶಾನ್ ಉಪಸ್ಥಿತರಿದ್ದರು. ಸಪ್ತಾಹ ನಿರ್ದೇಶಕ ಕಾಶಿನಾಥ್ ಗೋಗಟೆ ವರದಿ ವಾಚಿಸಿದರು.

Also Read  13 ವರ್ಷ ಪ್ರೀತಿಸಿ ಮದುವೆ ಹಿಂದಿನ ದಿನ ನಾಪತ್ತೆಯಾದ ಪ್ರೇಮಿ.!

 

ಜೇಸಿಐ ಕಡಬ ಘಟಕದ ಪೂರ್ವಾಧ್ಯಕ್ಷರಾದ ದಿನೇಶ್ ಆಚಾರ್ಯ, ತಸ್ಲೀಂ ಮರ್ಧಾಳ, ಪದಾಧಿಕಾರಿ ಮಹಮ್ಮದ್ ಝಫೀರ್, ಕಾಲೇಜಿನ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಜರಿದ್ದರು. ಜೇಸಿಐ ವಲಯ 15 ರ ವಲಯಾಧಿಕಾರಿ ಮೋಹನ್ ಕೋಡಿಂಬಾಳ ಸ್ವಾಗತಿಸಿ, ಅನಿಶ್ ಲೋಬೋ ವಂದಿಸಿದರು.

 

 

 

error: Content is protected !!
Scroll to Top