ಕರಾವಳಿಗೆ ಆಗಮಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ➤ ಸುಳ್ಯ ನ್ಯಾಯಾಲಯಕ್ಕೆ ಹಾಜರಾಗಿ ಸಾಕ್ಷಿ ನುಡಿದ ಡಿಕೆಶಿ

(ನ್ಯೂಸ್ ಕಡಬ) newskadaba.com ಸುಳ್ಯ, ಅ.05. ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಇಂದು ಕರಾವಳಿಗೆ ಆಗಮಿಸಿದ್ದು, ಸುಳ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗಿದ್ದಾರೆ‌.

ಡಿಕೆಶಿ ಈ ಹಿಂದೆ ಸಿದ್ಧರಾಮಯ್ಯ ಸಂಪುಟದಲ್ಲಿ ಇಂಧನ ಸಚಿವರಾಗಿದ್ದ ವೇಳೆ ವಿದ್ಯುತ್ ಸಮಸ್ಯೆ ಬಗ್ಗೆ ಕರೆ ಮಾಡಿದ್ದ ವ್ಯಕ್ತಿಯ ಜೊತೆ ವಾಗ್ವಾದ ನಡೆದಿದ್ದು, ಆ ಬಳಿಕ ಕರೆ ಮಾಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಲು ಸುಳ್ಯ ಕೋರ್ಟ್ ಡಿ.ಕೆ.ಶಿವಕುಮಾರ್ ಗೆ ಹಲವು ಬಾರಿ ನೊಟೀಸ್ ನೀಡಿದ್ದರೂ ಡಿಕೆಶಿ ಹಾಜರಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 29 ರಂದು ಖುದ್ದು ಹಾಜರಾಗುವಂತೆ ವಾರಂಟ್ ಜಾರಿಗೊಳಿಸಿತ್ತು. ಅಂದೂ ಗೈರಾಗಿದ್ದರಿಂದ ನ್ಯಾಯಾಲಯವು ಡಿ.ಕೆ. ಶಿವಕುಮಾರ್ ಗೆ ಫ್ರೋಕ್ಲಮೇಷನ್ ಆದೇಶ ಜಾರಿ ಮಾಡಿದ್ದು, ಈ ಹಿನ್ನಲೆಯಲ್ಲಿ ಇಂದು (ಅ.5) ರಂದು ಸುಳ್ಯ ನ್ಯಾಯಾಲದಲ್ಲಿ ನಡೆದ ವಿಚಾರಣೆಗೆ ಡಿ.ಕೆ. ಶಿವಕುಮಾರ್ ಹಾಜರಾಗಿದ್ದಾರೆ‌.

Also Read  ಶಿಕ್ಷಕರ ವರ್ಗ ಪರಿಷ್ಕೃತ ವೇಳಾಪಟ್ಟಿ ಪ್ರಕಟ..! ➤  ಜ.16ರವರೆಗೆ ಹೆಚ್ಚುವರಿ ಶಿಕ್ಷಕರ ದಾಖಲೆಗಳ ಪರಿಶೀಲನೆ 

 

 

 

error: Content is protected !!
Scroll to Top