ಕಡಬ: ವಿಷಕಾರಿ ಹಾವು ಕಡಿತ ➤ ವ್ಯಕ್ತಿ ಮೃತ್ಯು



(ನ್ಯೂಸ್ ಕಡಬ) newskadaba.com ಕಡಬ, ಅ.08. ವಿಷಕಾರಿ ಹಾವು ಕಡಿದು ವ್ಯಕ್ತಿಯೋರ್ವರು ಮೃತಪಟ್ಟ ಘಟನೆ ಕಡಬ ತಾಲೂಕಿನ ಇಚಿಲಂಪಾಡಿ ಎಂಬಲ್ಲಿ ಶುಕ್ರವಾರದಂದು ಸಂಭವಿಸಿದೆ.





ಮೃತ ವ್ಯಕ್ತಿಯನ್ನು ಇಚಿಲಂಪಾಡಿಯ ಬಿಜೇರು ನಿವಾಸಿ ನಾರಾಯಣ ಶೆಟ್ಟಿ ಎಂದು ಗುರುತಿಸಲಾಗಿದೆ. ಮೃತರು ಗುರುವಾರದಂದು ಗದ್ದೆಯ ಬದಿಯಲ್ಲಿ ಹಾದುಹೋಗುತ್ತಿದ್ದ ವೇಳೆ ವಿಷಕಾರಿ ಹಾವು ಕಡಿದಿದ್ದು, ತಕ್ಷಣವೇ ಅವರಿಗೆ ಪ್ರಥಮ ಚಿಕಿತ್ಸೆ ನೀಡಿ ಆಯುರ್ವೇದಿಕ್ ಪಂಡಿತರ ಬಳಿ ಕರೆದುಕೊಂಡು ಹೋಗಿ ಚಿಕಿತ್ಸೆ ನೀಡಲಾಗಿತ್ತು ಎನ್ನಲಾಗಿದೆ.  ಇಂದು ಗಾಯ ಉಲ್ಬಣಿಸಿ ರಕ್ತ ಸ್ರಾವ ಉಂಟಾದ ಹಿನ್ನೆಲೆಯಲ್ಲಿ ಅವರನ್ನು ನೆಲ್ಯಾಡಿಯ ಖಾಸಗಿ ಆಸ್ಪತ್ರೆಗೆ ಸಾಗಿಸುವ ಹಾದಿ ಮಧ್ಯೆ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.






 

 

 

error: Content is protected !!
Scroll to Top