ಕಡಬ: ಹವಾನಿಯಂತ್ರಿತ ಫ್ಯಾಮಿಲಿ ರೆಸ್ಟೋರೆಂಟ್ ‘ಹೋಟೆಲ್ ವೃದ್ಧಿ ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಅ.08. ಇಲ್ಲಿನ ಸೈಂಟ್ ಜೋಕಿಮ್ಸ್ ಕಾಲೇಜಿನ ಮುಂಭಾಗದಲ್ಲಿ ಸಸ್ಯಹಾರಿ ಹಾಗೂ ಮಾಂಸಹಾರಿ ಫ್ಯಾಮಿಲಿ ರೆಸ್ಟೋರೆಂಟ್ ‘ಹೋಟೆಲ್ ವೃದ್ಧಿ’ ಜ್ಯೂಸ್ & ಕ್ರೀಮ್ ಪಾರ್ಲರ್ ಶುಕ್ರವಾರದಂದು ಶುಭಾರಂಭಗೊಂಡಿತು.

ನೂತನ ಸಂಸ್ಥೆಯನ್ನು ನಿವೃತ್ತ ಶಿಕ್ಷಕ ನಾಗಪ್ಪ ಗೌಡ ಮರುವಂತಿಲ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಅಕ್ಟೋಬರ್ 16 ರಿಂದ ಆರಂಭಗೊಳ್ಳಲಿರುವ ಹವಾನಿಯಂತ್ರಿತ ಮೀನು ಮಾರಾಟ ಮಳಿಗೆ ‘ಮತ್ಸ್ಯದರ್ಶಿನಿ’ಯನ್ನು ಮಿನುಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ನಿತಿನ್ ಕುಮಾರ್ ಸಾಂಕೇತಿಕವಾಗಿ ಉದ್ಘಾಟಿಸಿದರು.

ವೇದಿಕೆಯಲ್ಲಿ ಕಡಬ ಜಿ.ಪಂ. ಮಾಜಿ ಸದಸ್ಯ ಪಿ.ಪಿ.ವರ್ಗೀಸ್, ಮಾಜಿ ಜಿ.ಪ ಸದಸ್ಯ ಸೈಯದ್ ಮೀರಾ ಸಾಹೇಬ್, ಕಡಬ ಸಿ.ಎ. ಬ್ಯಾಂಕ್ ಅಧ್ಯಕ್ಷ ರಮೇಶ್ ಕಲ್ಪುರೆ, ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷೆ ಪುಲಸ್ತ್ಯ ರೈ, ಜಿ.ಪಂ. ಮಾಜಿ ಸದಸ್ಯೆ ಆಶಾ ತಿಮ್ಮಪ್ಪ, ಮರ್ದಾಳ ಗ್ರಾ.ಪಂ.ಮಾಜಿ ಅಧ್ಯಕ್ಷ ಜನಾರ್ದನ ಗೌಡ ಪುತ್ತಿಲ, ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮತ್ತಡಿ, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಸದಸ್ಯ ಮನೋಹರ ರೈ, ನಿವೃತ್ತ ಮುಖ್ಯ ಶಿಕ್ಷಕ ಸಾಂತಪ್ಪ ಗೌಡ, ಶಿವಣ್ಣ ಗೌಡ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಕುಟ್ರುಪಾಡಿ ಗ್ರಾ.ಪಂ. ಅಧ್ಯಕ್ಷ ಮೋಹನ್ ಕೆರೆಕೋಡಿ, ಬಿಳಿನೆಲೆ ಗ್ರಾ.ಪಂ. ಮಾಜಿ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಐತ್ತೂರು ಗ್ರಾ.ಪಂ. ಮಾಜಿ ಅಧ್ಯಕ್ಷ ಸತೀಶ್ ಪೂಜಾರಿ, ಉದ್ಯಮಿ ಸುಂದರ ಗೌಡ ಮಂಡೆಕರ, ಶ್ರಿಕಂಠಸ್ವಾಮಿ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಮುತ್ತು ಕುಮಾರ್, ಸೀನಿಯರ್ ಛೇಂಬರ್ ಅಧ್ಯಕ್ಷ ಸಿ.ಸಿ. ಚೆರಿಯನ್, ಕಡಬ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ನಾಗರಾಜ್ ಎನ್.ಕೆ, ತಾ.ಪಂ. ಮಾಜಿ ಸದಸ್ಯ ಸಿ.ಪಿ. ಸೈಮನ್, ಎ.ಪಿ.ಎಂ.ಸಿ ಮಾಜಿ ಸದಸ್ಯ ರಾಯ್ ಅಬ್ರಹಾಂ, ಚೆನ್ನಪ್ಪ ಗೌಡ ಪಾಲೋಳಿ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಫೈಝಲ್, ಮರ್ದಾಳ ಗ್ರಾ.ಪಂ. ಅಧ್ಯಕ್ಷ ಹರೀಶ್ ಕೊಡಂದೂರು, ಕಡಬ ಶ್ರೀ ದುರ್ಗಾಂಬಿಕಾ ಭಜನಾ ಮಂಡಳಿ ಅಧ್ಯಕ್ಷ ಸೋಮಪ್ಪ ನಾಕ್, ಒಕ್ಕಲಿಗ ಸಂಘದ ಅಧ್ಯಕ್ಷ ತಮ್ಮಯ್ಯ ಗೌಡ, ರೋಟರಿ ಅಧ್ಯಕ್ಷ ಸುಜಿತ್ ಪಿ.ಕೆ., ಜೇಸಿಐ ಕಡಬ ಕದಂಬ ಅಧ್ಯಕ್ಷ ತಿರುಮಲೇಶ್ ಭಟ್, ವಿ.ಹಿಂ.ಪ ಅಧ್ಯಕ್ಷ ರಾಧಾಕೃಷ್ಣ ಕೋಲ್ಪೆ, ನಿವೃತ್ತ ಮುಖ್ಯ ಶಿಕ್ಷಕ ಕುಶಾಲಪ್ಪ ಗೌಡ ಪೊಸವಳಿಕೆ, ಮಾಜಿ ಗ್ರಾ.ಪಂ. ಅಧ್ಯಕ್ಷ ಹನೀಫ್ ಕೆ.ಎಂ., ಸಿವಿಲ್ ಕಾಂಟ್ರಾಕ್ಟರ್ ರವಿ ಕಕ್ಕೆಪದವು, ಉದ್ಯಮಿ ನಾರಾಯಣ ಮಣಿಯಾಣಿ, ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಶ್ರೀ ಕೃಷ್ಣ ಎಂ. ಆರ್. ಸೇರಿದಂತೆ ಹಲವಾರು ಮಂದಿ ಉಪಸ್ಥಿತರಿದ್ದರು. ಸಂಸ್ಥೆಯ ಮಾಲಕರಾದ ಸೀತಾರಾಮ ಗೌಡ ಪ್ರಾಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು. ನಿರ್ಮಲ ಸೀತಾರಾಮ ಗೌಡ ವಂದಿಸಿದರು. ಯುವಜನ ಒಕ್ಕೂಟ ಅಧ್ಯಕ್ಷ ಶಿವಪ್ರಸಾದ್ ರೈ ಮೈಲೇರಿ ಕಾರ್ಯಕ್ರಮ ನಿರೂಪಿಸಿದರು.

error: Content is protected !!

Join the Group

Join WhatsApp Group