(ನ್ಯೂಸ್ ಕಡಬ) Newskadaba.com ವಿಟ್, ಅ. 11. ಯುವತಿಯೋರ್ವಳು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಸೋಮವಾರದಂದು ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ ಯುವತಿಯನ್ನು ವಿಟ್ಲಕಸಬಾ ಗ್ರಾಮದ ನೇತ್ರಕೆರೆ ನಿವಾಸಿ ಬಾಬು ನಾಯ್ಕ ಅವರ ಪುತ್ರಿ ನಿಶ್ಮಿತಾ(22) ಎಂದು ಗುರುತಿಸಲಾಗಿದೆ. ನಿಶ್ಮಿತಾರವರು ಡೆಂಟಲ್ ಕ್ಲಿನಿಕ್ ವೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದು, ಭಾನುವಾರ ಸಂಜೆಯಿಂದ ನಾಪತ್ತೆಯಾಗಿದ್ದು, ಈ ಕುರಿತು ವಿಟ್ಲ ಠಾಣೆಯಲ್ಲಿ ನಾಪತ್ತೆ ಪ್ರಕರಣ ದಾಖಲಿಸಲಾಗಿತ್ತು. ಆದರೆ ಇಂದು (ಅ.11) ಮುಂಜಾನೆ ಕೆರೆಯೊಂದರಲ್ಲಿ ಮೃತದೇಹ ಪತ್ತೆಯಾಗಿದ್ದು, ಅಲ್ಲದೇ ಘಟನಾ ಸ್ಥಳದಲ್ಲಿ ಡೆತ್ ನೋಟ್ ಮತ್ತು ಮೊಬೈಲ್ ಕೂಡ ಪತ್ತೆಯಾಗಿದೆ. ಡೆತ್ ನೋಟ್ ನಲ್ಲಿ ಕೆಲವರ ಹೆಸರು ಉಲ್ಲೇಖಿಸಿದ್ದಾರೆ ಎನ್ನಲಾಗಿದೆ. ಈ ಕುರಿತು ವಿಟ್ಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆತ್ಮಹತ್ಯೆಗೆ ನಿಖರ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ. ಪ್ರಕರಣದ ಕುರಿತು ಪೊಲೀಸರು ತನಿಖೆ ಮುಂದುವರಿಸಿದ್ದಾರೆ.