ಬೆಂಗಳೂರಿನಿಂದ ಕಾಣೆಯಾಗಿದ್ದ 4 ಮಕ್ಕಳು ಮಂಗಳೂರಿನಲ್ಲಿ ಪತ್ತೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 12. ಓದಿನಲ್ಲಿ ಆಸಕ್ತಿ‌ಯಿಲ್ಲ, ಕ್ರೀಡೆಯಲ್ಲಿ ಆಸಕ್ತಿಯಿರುವುದಾಗಿ ಪತ್ರ ಬರೆದು ಬೆಂಗಳೂರಿನಿಂದ ನಾಪತ್ತೆಯಾಗಿದ್ದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆ ಎಂದು ತಿಳಿದು ಬಂದಿದೆ.

ಒಟ್ಟು 7 ಮಕ್ಕಳು ನಾಪತ್ತೆಯಾಗಿದ್ದು, ಇದರ ಪೈಕಿ ಮೂವರು ಮೈಸೂರಿನಲ್ಲಿ ಪತ್ತೆಯಾಗಿದ್ದರು. ಇದೀಗ ಉಳಿದ ನಾಲ್ವರು ಮಕ್ಕಳು ಮಂಗಳೂರಿನಲ್ಲಿ ಪತ್ತೆಯಾಗಿದ್ದಾರೆನ್ನಲಾಗಿದೆ. ಸದ್ಯ ಈ ನಾಲ್ವರು ಮಕ್ಕಳು ಪಾಂಡೇಶ್ವರ ಠಾಣಾ ಪೊಲೀಸರ ವಶದಲ್ಲಿದ್ದು, ಉಪ್ಪಾರಪೇಟೆ ಪೊಲೀಸರಿಗೆ ಹಸ್ತಾಂತರಿಸಲಿದ್ದಾರೆ ಎಂಬ ಮಾಹಿತಿ ದೊರೆತಿದೆ.

Also Read  ಈಚರ್ ಲಾರಿ ಹಾಗೂ ಬೈಕ್ ನಡುವೆ ಢಿಕ್ಕಿ ➤ ಬೈಕ್ ಸವಾರ ಮೃತ್ಯು

error: Content is protected !!
Scroll to Top