ನಾಳೆ (ಅ. 13) ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರಿಗೆ

(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 12. ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಅ.13 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ.

 

ಅ. 13ರಂದು ಬೆಳಗ್ಗೆ 9 ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟು ಬೆಳಿಗ್ಗೆ 10 ಗಂಟೆಗೆ ಮಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಬೆಳಿಗ್ಗೆ 11 ಗಂಟೆಗೆ ಉಡುಪಿಗೆ ತೆರಳುವರು. ಅಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ ಬಳಿಕ ಸಂಜೆ 5.30ಕ್ಕೆ ಮಂಗಳೂರಿಗೆ ಆಗಮಿಸಿ, ಸಂಜೆ 6.55ಕ್ಕೆ ವಿಮಾನದ ಮೂಲಕ ಬೆಂಗಳೂರಿಗೆ ಪ್ರಯಾಣಿಸಲಿದ್ದಾರೆ ಎಂದು ಮುಖ್ಯಮಂತ್ರಿಗಳ ವಿಶೇಷ ಕರ್ತವ್ಯಾಧಿಕಾರಿ ಹಾಗೂ ಪದನಿಮಿತ್ತ ಸರಕಾರದ ಜಂಟಿ ಕಾರ್ಯದರ್ಶಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Also Read  ರಾಜ್ಯದಲ್ಲಿ ಬರದ ಪರಿಸ್ಥಿತಿ- ಈ ಬಾರಿ ಸರಳ ದಸರಾ ಆಚರಣೆಗೆ ನಿರ್ಧರಿಸಿದ ಸರಕಾರ

error: Content is protected !!
Scroll to Top