12ರಿಂದ 18 ವರ್ಷದ ಒಳಗಿನ ಮಕ್ಕಳಿಗೆ ಕೋವಿಡ್ ಲಸಿಕೆ ನೀಡಲು ಡಿಸಿಜಿಐ ನಿಂದ ಗ್ರೀನ್ ಸಿಗ್ನಲ್

(ನ್ಯೂಸ್ ಕಡಬ) Newskadaba.com ನವದೆಹಲಿ, ಅ. 12. ಕೋವಿಡ್ ಲಸಿಕೆ ಕೋವ್ಯಾಕ್ಸಿನ್ ಅನ್ನು 2 ರಿಂದ 18 ವರ್ಷದ ವಯೋಮಾನದವರಿಗೆ ನೀಡಲು ತಜ್ಞರ ಸಮಿತಿ ಗ್ರೀನ್ ಸಿಗ್ನಲ್ ನೀಡಿದೆ.

ಭಾರತ್ ಬಯೋಟೆಕ್ ಕಂಪನಿ ಅಭಿವೃದ್ಧಿಪಡಿಸಿರುವ ಕೋವ್ಯಾಕ್ಸಿನ್ ಕೋವಿಡ್–19 ಲಸಿಕೆಯನ್ನು, 2ರಿಂದ 18 ವರ್ಷದ ಒಳಗಿನವರಿಗೆ ನೀಡಬಹುದೆಂದು ವಿಷಯ ತಜ್ಞರ ಸಮಿತಿಯು ಭಾರತೀಯ ಪ್ರಧಾನ ಔಷಧ ನಿಯಂತ್ರಕಕ್ಕೆ (ಡಿಸಿಜಿಐ) ಶಿಫಾರಸು ಮಾಡಿರುವುದಾಗಿ ಅಧಿಕೃತ ಮೂಲಗಳು ತಿಳಿಸಿವೆ ಎಂದು ಸುದ್ದಿ ಸಂಸ್ಥೆಯೊಂದು ವರದಿ ಮಾಡಿದೆ.

Also Read  ಹತ್ರಾಸ್ ಅತ್ಯಾಚಾರ ಪ್ರಕರಣ: ಯುವತಿಗೆ ನ್ಯಾಯ ಒದಗಿಸಿಕೊಡಲು ಮುಂದಾದ ವಕೀಲೆ ಸೀಮಾ ಖುಷ್ವಾ

error: Content is protected !!
Scroll to Top