ಕಡಬ: ನೇಣುಬಿಗಿದು ಯುವಕ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಕಡಬ, ಅ. 12. ಯುವಕನೋರ್ವ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಕುಕ್ಕೇ ಸುಬ್ರಹ್ಮಣ್ಯದ ದೇವರಗದ್ದೆ ಎಂಬಲ್ಲಿ ನಡೆದಿದೆ.


ಆತ್ಮಹತ್ಯೆ ಮಾಡಿಕೊಂಡ ಯುವಕನನ್ನು ಕಡಬ ತಾಲೂಕಿನ ಚಾರ್ವಾಕ ಗ್ರಾಮದ ಉಮೇಶ್ ಎಂದು ಗುರುತಿಸಲಾಗಿದೆ. ಈತ ಮೂಲತಃ ತಾಲೂಕಿನ ಚಾರ್ವಾಕ ಗ್ರಾಮದವನಾಗಿದ್ದು, ಕಳೆದ ಮೂರ್ನಾಲ್ಕು ವರ್ಷಗಳಿಂದ ಕುಕ್ಕೆ ಸುಬ್ರಹ್ಮಣ್ಯದ ದೇವರಗದ್ದೆಯಲ್ಲಿ ವಾಸವಾಗಿದ್ದರು ಎನ್ನಲಾಗಿದೆ. ಸದ್ಯ ಆತ್ಮಹತ್ಯೆಗೆ ನಿಖರ ಕಾರಣವೇನು ಎಂಬುದು ಇನ್ನಷ್ಟೇ ತಿಳಿದು ಬರಬೇಕಿದೆ.

Also Read  ಕಡಬ: ಶ್ರೀ ವಿಶ್ವಕರ್ಮ ಜಯಂತಿ ಆಚರಣೆ ➤‌ ವಿಶ್ವಕರ್ಮ ಸಮುದಾಯದ ಕಾರ್ಯ, ಕೌಶಲ್ಯ ಅನುಕರಣೀಯ- ತಹಶೀಲ್ದಾರ್

error: Content is protected !!
Scroll to Top