ಮಂಗಳೂರು: ವ್ಯಕ್ತಿಗೆ ಚೂರಿ ಇರಿದು ಪರಾರಿಯಾದ ದುಷ್ಕರ್ಮಿಗಳು



(ನ್ಯೂಸ್ ಕಡಬ) newskadaba.com ಮಂಗಳೂರು, ಅ. 14. ವ್ಯಕ್ತಿಯೋರ್ವರ ಬೆನ್ನಿಗೆ ದುಷ್ಕರ್ಮಿಗಳ ತಂಡವೊಂದು ಚೂರಿಯಿಂದ ಇರಿದು ಪರಾರಿಯಾದ ಘಟನೆ ಕಾವೂರು ಠಾಣಾ ವ್ಯಾಪ್ತಿಯ ಮಾಲೆಮಾರ್ ಎಂಬಲ್ಲಿ ಬುಧವಾರ ತಡರಾತ್ರಿ ನಡೆದಿದೆ.







ಚೂರಿ ಇರಿತಕ್ಕೊಳಗಾದವರನ್ನು ಪಂಜಿಮೊಗರು ರಾಜೇಶ್(45) ಎಂದು ಗುರುತಿಸಲಾಗಿದೆ. ಇವರು ಎಂದಿನಂತೆ ತಮ್ಮ ಕೆಲಸ ಮುಗಿಸಿ ಹಿಂದಿರುಗುತ್ತಿದ್ದ ವೇಳೆ ಮಾಲೆಮಾರ್ ಎಂಬಲ್ಲಿ ದುಷ್ಕರ್ಮಿಗಳ ತಂಡವೊಂದು ಬೆನ್ನಿಗೆ ಮೂರು ಬಾರಿ ಚೂರಿಯಿಂದ ಇರಿದು ಪರಾರಿಯಾಗಿದ್ದಾರೆ. ತಕ್ಷಣವೇ ರಾಜೇಶ್ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆಗೆ ಸ್ಪಷ್ಟ ಕಾರಣ ತಿಳಿದು ಬಂದಿಲ್ಲ. ಸ್ಥಳಕ್ಕೆ ಕಾವೂರು ಠಾಣಾ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top