(ನ್ಯೂಸ್ ಕಡಬ) Newskadaba.com ಮಂಗಳೂರು, ಅ. 14. ತನ್ನ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಕ್ಕೆ ಸಂಬಂಧಿಸಿ, ದಕ್ಷಿಣ ಕನ್ನಡ ಜಿಲ್ಲಾ ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರನ್ನು ಪಾಂಡೇಶ್ವರ ಮಹಿಳಾ ಠಾಣಾ ಪೊಲೀಸರು ಬಂಧಿಸಿದ ಘಟನೆ ನಡೆದಿದೆ.
ಬಂಧಿತನನ್ನು ಮೊಹಮ್ಮದ್ ಫಾರೂಕ್ (45) ಎಂದು ಗುರುತಿಸಲಾಗಿದೆ. ಈತ ತನ್ನ ಕಚೇರಿಯಲ್ಲಿ ಕೆಲಸಕ್ಕಿದ್ದ 19 ವರ್ಷದ ಯುವತಿಗೆ ಲೈಂಗಿಕ ಕಿರುಕುಳ ನೀಡಲೆತ್ನಿಸಿ, ವಾಟ್ಸಪ್ ಮೂಲಕ ನಗ್ನ ಚಿತ್ರಗಳನ್ನು ಕಳುಹಿಸಿ, ಸಹಕರಿಸುವಂತೆ ಒತ್ತಾಯಿಸುತ್ತಿದ್ದ. ಅಲ್ಲದೇ ನಿನ್ನ ನಗ್ನ ಚಿತ್ರವನ್ನು ಕಳುಹಿಸುವಂತೆ ಆರೋಪಿ ಒತ್ತಾಯಿಸುತ್ತಿದ್ದ ಎನ್ನಲಾಗಿದೆ. ಇದಕ್ಕೆ ಸಹಕರಿಸದ ಆಕೆ ಆತನಿಂದ ದೂರವಿದ್ದು, ಇದರ ನಡುವೆ ಆತ ಕಛೇರಿಯಲ್ಲಿ ಆಕೆಯ ಮೈಗೆ ಕೈಹಾಕಿ ಲೈಂಗಿಕ ಕಿರುಕುಳ ನೀಡಿದ್ದಾನೆ. ಬಳಿಕ ಕೆಲಸವನ್ನೇ ಬಿಟ್ಟು ತೆರಳಿದ್ದ ಯುವತಿ ಎರಡು ದಿನಗಳ ಹಿಂದೆ ಪಾಂಡೇಶ್ವರ ಮಹಿಳಾ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿ ಮಹಿಳಾ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.