ಅಂಗಳದಲ್ಲಿದ್ದ ನಿಂತಿದ್ದ ವೇಳೆ ಮೈಮೇಲೆ ಉರುಳಿ ಬಿದ್ದ ಮರ ➤ ಚಿಕಿತ್ಸೆ ಫಲಿಸದೇ ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) Newskadaba.com ಧರ್ಮಸ್ಥಳ, ಅ. 14. ಮನೆಯ ಅಂಗಳದಲ್ಲಿದ್ದ ಮರವೊಂದು ಆಕಸ್ಮಿಕವಾಗಿ ಬಿದ್ದ ಪರಿಣಾಮ ವ್ಯಕ್ತಿಯೋರ್ವರಿಗೆ ಗಂಭಿರ ಗಾಯಗೊಂಡು ಮೃತಪಟ್ಟ ಘಟನೆ ಪುದುವೆಟ್ಟು ಎಂಬಲ್ಲಿ ನಡೆದಿದೆ.


ಮೃತಪಟ್ಟವರನ್ನು ಪುದುವೆಟ್ಟು ಗ್ರಾಮದ ಸಾಮೆದಕಲಪು ವರಸಾರಿ ಮನೆ ನಿವಾಸಿ ಆದಂ ಸಾಹೇಬ್(61) ಎಂದು ಗುರುತಿಸಲಾಗಿದೆ. ಇವರು ಬುಧವಾರದಂದು ಮಧ್ಯಾಹ್ನದ ವೇಳೆ ಮನೆಯ ಅಂಗಳದಲ್ಲಿ ನಿಂತುಕೊಂಡಿದ್ದ ಸಂದರ್ಭ ಆಕಸ್ಮಿಕವಾಗಿ ಅಂಗಳದ ಬದಿಯಲ್ಲಿದ್ದ ಮರವೊಂದು ಬೇರು ಸಮೇತ ಅವರ ಮೇಲೆ ಉರುಳಿ ಬಿದ್ದಿದೆ. ಪರಿಣಾಮ ಅವರ ತಲೆಗೆ ಗಂಭೀರ ಗಾಯವಾಗಿದ್ದು, ಕೂಡಲೇ ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗೆ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.

Also Read  ಸುಬ್ರಹ್ಮಣ್ಯ:  ಅಂಗಡಿ ಮೇಲೆ ಅಧಿಕಾರಿಗಳ ದಾಳಿ- ತಂಬಾಕು ಉತ್ಪನ್ನಗಳು ವಶಕ್ಕೆ

error: Content is protected !!
Scroll to Top