(ನ್ಯೂಸ್ ಕಡಬ) Newskadaba.com ನವದೆಹಲಿ, ಅ. 16. ಭಾರತ ಕ್ರಿಕೆಟ್ ತಂಡದ ಮುಖ್ಯ ಕೋಚ್ ಆಗಿ ರಾಹುಲ್ ದ್ರಾವಿಡ್ ಅವರನ್ನು ನೇಮಕ ಮಾಡಲಾಗಿದೆ ಎಂದು ಎಎನ್‌ಐ ವರದಿ ತಿಳಿಸಿದೆ.
ಬಹುನಿರೀಕ್ಷಿತ ಐಸಿಸಿ ಟಿ20 ವಿಶ್ವಕಪ್ ಮುಗಿದ ತಕ್ಷಣ ಹಾಲಿ ಕೋಚ್ ರವಿ ಶಾಸ್ತ್ರಿ ಅವರ ಅವಧಿ ಮುಗಿಯಲಿದ್ದು, ಬಳಿಕ ರಾಹುಲ್ ದ್ರಾವಿಡ್ ಕೋಚ್ ಜವಾಬ್ದಾರಿ ವಹಿಸಿಕೊಳ್ಳಲಿದ್ದಾರೆ ಎನ್ನಲಾಗಿದೆ.