ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಸಿಎಂ ಗೆ ಮನವಿ

(ನ್ಯೂಸ್ ಕಡಬ) newskadaba.com ಮಂಗಳೂರು, ಅ. 16. ಕೋರೋನಾ ಸೋಂಕಿನಿಂದ ಮೃತಪಟ್ಟ ಯಶವಂತ ಐಕಳ ಅವರ ಕುಟುಂಬಕ್ಕೆ ಆರ್ಥಿಕ ನೆರವು ನೀಡಬೇಕು, ಪತ್ರಕರ್ತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ನಾಯಕ್ ಇಂದಾಜೆ ರವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಮಂಗಳೂರು ದಕ್ಷಿಣ ಶಾಸಕ ವೇದವ್ಯಾಸ ಕಾಮತ್, ಪ್ರೆಸ್ ಕ್ಲಬ್ ಅಧ್ಯಕ್ಷ ಅನ್ನು ಮಂಗಳೂರು, ಪತ್ರಕರ್ತರ ಸಂಘದ ಕೋಶಾಧಿಕಾರಿ ಬಿ.ಎನ್.ಪುಷ್ಪರಾಜ್, ಪತ್ರಕರ್ತರ ಗೃಹ ನಿರ್ಮಾಣ ಸಹಕಾರ ಸಂಘದ ನಿರ್ದೇಶಕ ಸುಖ್ ಪಾಲ್ ಪೊಳಲಿ ಉಪಸ್ಥಿತರಿದ್ದರು.

Also Read  ಮಳೆ ನೀರಿಗೆ ಯುವತಿ ಮೃತ್ಯು    ➤ BBMP ಅಧಿಕಾರಿಗಳ ವಿರುದ್ಧ ದೂರು ದಾಖಲು

error: Content is protected !!
Scroll to Top