ನಾಲ್ವರು ಹೆಣ್ಣು ಮಕ್ಕಳಿಗೆ ವಿಷವುಣಿಸಿ ತಂದೆ ಆತ್ಮಹತ್ಯೆ..!

(ನ್ಯೂಸ್ ಕಡಬ) Newskadaba.com ಬೆಳಗಾವಿ, ಅ. 23. ನಾಲ್ವರು ಮಕ್ಕಳಿಗೆ ವಿಷವುಣಿಸಿ ತಂದೆಯು ಆತ್ಮಹತ್ಯೆಗೆ ಶರಣಾದ ದಾರುಣ ಘಟನೆ ಬೆಳಗಾವಿ ತಾಲೂಕಿನ ಬೋರಗಲ್​​ ಗ್ರಾಮದಲ್ಲಿ ನಡೆದಿದೆ.


ಮೃತರನ್ನು ಹಾದಿಮನಿ (46) ಮಕ್ಕಳಾದ ಸೌಮ್ಯಾ ಹಾದಿಮನಿ (19), ಶ್ವೇತಾ ಹಾದಿಮನಿ (16), ಸಾಕ್ಷಿ ಹಾದಿಮನಿ (11), ಸೃಜನ ಹಾದಿಮನಿ(8) ಎಂದು ಗುರುತಿಸಲಾಗಿದೆ. ಬ್ಲಾಕ್ ಫಂಗಸ್​ನಿಂದಾಗಿ ಇತ್ತೀಚೆಗೆ ಪತ್ನಿಯು ಮೃತಪಟ್ಟಿದ್ದರು. ಇದರಿಂದ ಮನನೊಂದ ಹಾದಿಮನಿ, ನಾಲ್ವರು ಮಕ್ಕಳಿಗೆ ವಿಷವುಣಿಸಿ ಬಳಿಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನಾ ಸ್ಥಳಕ್ಕೆ ಸಂಕೇಶ್ವರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Also Read  ಹಿಜಾಬ್ ವಿವಾದ- ಸೋಮವಾರದಿಂದ ಹತ್ತನೇ ತರಗತಿವರೆಗೆ ಶಾಲೆ ಆರಂಭ ➤ ಸಿಎಂ ಬೊಮ್ಮಾಯಿ

error: Content is protected !!
Scroll to Top