ಪೊಲೀಸ್ ನೇಮಕಾತಿ ಪರೀಕ್ಷೆಯಲ್ಲಿ ಅಕ್ರಮ ➤ 14 ಮಂದಿಯ ಬಂಧನ

(ನ್ಯೂಸ್ ಕಡಬ) Newskadaba.com ಬೆಳಗಾವಿ, ಅ. 25. ರಾಜ್ಯಾದ್ಯಂತ 3,533 ನಾಗರಿಕ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿ, ಭಾನುವಾರ ನಡೆದ ಲಿಖಿತ ಪರೀಕ್ಷೆಯಲ್ಲಿ ಅಕ್ರಮ ನಡೆದಿದ್ದು, ಇದಕ್ಕೆ ಸಂಬಂಧಿಸಿದಂತೆ 14 ಮಂದಿಯನ್ನು ಬಂಧಿಸಲಾಗಿದೆ.

ನೇಮಕಾತಿ ಪರೀಕ್ಷೆಯ ವೇಳೆ ಬ್ಲೂಟೂತ್ ಸಾಧನ ಬಳಸಿಕೊಂಡು ನಕಲು ಮಾಡುತ್ತಿದ್ದ ಇಬ್ಬರು ಪರೀಕ್ಷಾರ್ಥಿಗಳು ಹಾಗೂ ಇದಕ್ಕೆ ಸಹಕರಿಸಿದ 12 ಮಂದಿ ಸೇರಿದಂತೆ 14 ಮಂದಿಯನ್ನು ಕಾರ್ಯಾಚರಣೆ ನಡೆಸಿದ ಪೊಲೀಸರು ಬಂಧಿಸಿದ್ದಾರೆ. ರಾಮತೀರ್ಥ ಪಟ್ಟಣದ ಕೊಠಡಿಯಲ್ಲಿ ಅತ್ಯಾಧುನಿಕ ತಂತ್ರಜ್ಞಾನಗಳನ್ನು ಬಳಸಿಕೊಂಡು ನಕಲು ಮಾಡಲು ಸಹಾಯ ಮಾಡುತ್ತಿರುವ ಬಗ್ಗೆ ಮಾಹಿತಿ ಪಡೆದ ಪೊಲೀಸರು ದಿಢೀರ್ ದಾಳಿ ನಡೆಸಿ 12 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಿಂದ 9 ಮಾಸ್ಟರ್ ಕಾರ್ಡ್, 19 ಬ್ಲೂಟೂತ್, 33 ಮೊಬೈಲ್, 1 ಲ್ಯಾಪ್ ಟಾಪ್ ಹಾಗೂ ವಾಹನಗಳನ್ನು ವಶಕ್ಕೆ ಪಡೆಯಲಾಗಿದೆ.

Also Read  ಜಿಲ್ಲಾ ನ್ಯಾಯಾಲಯ ಸಮುಚ್ಛಯದೊಳಗೆ ನುಗ್ಗಿದ ಅಪರಚಿತ ವ್ಯಕ್ತಿ

error: Content is protected !!
Scroll to Top